Friday, March 20, 2026
Friday, March 20, 2026

Breaking News ಸಿನಿಮಾ ನಿರ್ಮಾಪಕರಿಗೆ ಸಿಹಿ ಸುದ್ದಿ.ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೊ ನಿರ್ಮಿಸಲು ಸಿದ್ಧ- ಮೊಹಬೂಬ್ ಭಾಷಾ

Date:

Breaking News ಶಿವಮೊಗ್ಗ ಸಿನಿಮಾ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡುತ್ತಿದ್ದು, ಈ ಉದ್ದೇಶದಿಂದ ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋವನ್ನು ನಿರ್ಮಾಣ ಮಾಡಲು ನಿಗಮದಿಂದ ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ನಿಗಮದ ಅಧ್ಯಕ್ಷರಾದ ಮೊಹಬೂಬ್ ಭಾಷಾ ತಿಳಿಸಿದರು.

ಭಾನುವಾರ ನಗರದ ಪ್ರತಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,

ಕಂಠೀರವ ಸ್ಟುಡಿಯೋವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಣೆ ಮಾಡುವ ಉದ್ದೇಶವನ್ನು ನಿಗಮ ಹೊಂದಿದ್ದು, ಇದಕ್ಕಾಗಿ ಜಿಲ್ಲಾವಾರುಗಳಲ್ಲಿ ಬಹಳಷ್ಟು ಬೇಡಿಕೆಯೂ ಸಹ ಇತ್ತು. ಹಾಗಾಗಿ ಕಂಠೀರವ ಸ್ಟುಡಿಯೋವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣ ಮಾಡಲು ಸಿದ್ದವಾಗಿದ್ದೇವೆ. ಇದಕ್ಕೆ ಸಂಬಂಧಪಟ್ಟಂತೆ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಯಲ್ಲಿರುವ 25 ಎಕರೆಯ ಅನುಪಯುಕ್ತವಾಗಿರುವ ಭೂಮಿಯನ್ನು ಸ್ಟುಡಿಯೋ ನಿರ್ಮಾಣ ಕೊಡಿ ಎಂದು ಡಿಸಿ ಮನವಿ ಮಾಡಲಾಗಿದೆ ಎಂದರು.

ಶಿವಮೊಗ್ಗ ಕನ್ನಡದಲ್ಲಿ ಶ್ರೀಮಂತ ಜಿಲ್ಲೆ. ಇಲ್ಲಿ ಸಿನಿಮಾ ಕಲಾವಿದರು ತುಂಬಾ ಇದ್ದಾರೆ. ಇವೆಲ್ಲರನ್ನೂ ಜಾಗತೀಕ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ. ಹಾಗೂ ಶಿವಮೊಗ್ಗದಲ್ಲಿ ನಡೆಯುವ ಹೊರಾಂಗಣ ಮತ್ತು ಒಳಾಂಗಣ ಚಿತ್ರೀಕರಣಕ್ಕೆ ಇದು ಬಹಳಷ್ಟು ಅನುಕೂಲವಾಗಲಿದೆ. ಇದರಿಂದ ಭಾಷೆ ಉಳಿಯುತ್ತದೆ ಹಾಗೂ ಪ್ರತಿಭೆಗಳು ಬೆಳೆಯುತ್ತಾರೆ. ಉದ್ಯೋಗವೂ ಕೂಡ ಸೃಷ್ಟಿಯಾಗಲಿದೆ ಎಂದರು.

Breaking News ಬೆಂಗಳೂರು ಹಾಗೂ ಮೈಸೂರಿನಿಂದ ದೂರವಿರುವ ಮಧ್ಯ ಕರ್ನಾಟಕ ಭಾಗಗಳಾದ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯನಗರ ಜಿಲ್ಲೆಗಳಲ್ಲಿ ಸ್ಟುಡಿಯೋ ನಿರ್ಮಿಸುವ ಯೋಜನೆ ಮಾಡಲಾಗಿದ್ದು, ಈಗಾಗಲೇ ಸರ್ಕಾರ ತನ್ನ ಬಜೆಟ್‌ನಲ್ಲಿ 5 ಕೋಟಿ ಅನುದಾನವನ್ನು ನೀಡಿದೆ. ಇನ್ನೂ ಮೈಸೂರಿನಲ್ಲಿ 160 ಎಕರೆಯಲ್ಲಿ ರಾಮೋಜಿ ಫೀಲ್ಮಿ ಸಿಟಿ ಮಾದರಿಯಂತೆ ಫಿಲ್ಮಿಸಿಟಿ ಯನ್ನು ವಾರ್ತಾ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕನ್ನಡದಲ್ಲಿ ಓಟಿಟಿ ಪ್ರಾರಂಭ ಮಾಡಲು ನಿಗಮದಿಂದ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಕನ್ನಡದ ಕಿರುತೆರೆ, ಬೆಳ್ಳಿ ಪರದೆಗೆ ಹಾಗೂ ಅವುಗಳ ಕಾರ್ಯಗಳಿಗೆ ಓಟಿಟಿ ನಿರ್ಮಾಣ ಮಾಡಲು ಸರ್ಕಾರ 2025 ರ ಅಯವ್ಯಯದಲ್ಲಿ ಅನುದಾನ ನೀಡಲು ಮುಂದಾಗಿದೆ.

ಕನ್ನಡ ಓಟಿಟಿ ಸರ್ಕಾರದ ಕಾರ್ಯಕ್ರಮವಾಗಿದ್ದು, ಅದಕ್ಕೆಂದು ಸಮಿತಿಯನ್ನು ರಚನೆ ಮಾಡಲಾಗಿದೆ. ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ಎರಡು ಸಭೆಗಳನ್ನು ನಡೆಸಿದ್ದು, ಓಟಿಟಿ ನಿರ್ಮಾಣಕ್ಕೆ ಬೇಕಾದ ಎಲ್ಲಾ ರೂಪರೇಷೆಗಳನ್ನು ತಯಾರಿಸಲಾಗಿದೆ ಎಂದರು.

ಸರ್ಕಾರ ಕನ್ನಡ ಭಾಷೆಯನ್ನು ಬೆಳೆಸಬೇಕು ಹಾಗೂ ಉಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯವನ್ನು ಮಾಡುತ್ತಿದೆ. ಓಟಿಟಿ ಪರಿಣಾಮವಾಗಿ ಕೆಲಸ ಮಾಡಲಿದ್ದು, ಇದರಿಂದ ಜಾಗತೀಕ ಮಟ್ಟದಲ್ಲಿ ಕನ್ನಡಕ್ಕೆ ಸ್ಥಾನಮಾನ ದೊರಕುತ್ತದೆ. ನಮ್ಮ ಮಣ್ಣಿನ ಗ್ರಾಮೀಣ ಶೈಲಿಯ ಬದುಕು ಓಟಿಟಿ ಮೂಲಕ ಇಡೀ ಜಗತ್ತು ನೋಡುವಂತಾಗುತ್ತದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡ ಎನ್.ರಮೇಶ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...