Sri Sri Sri Dr.Nirmalanandanatha Maha Swamiji ಪ್ರತಿಭೆ ಎಲ್ಲಾ ಮಕ್ಕಳಲ್ಲಿ ಅಡಗಿರುತ್ತದೆ.ಅದನ್ನು ಹೊರ ತೆಗೆಯುವುದಕ್ಕಾಗಿಯೇ ವಿವಿಧ ಸಾಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ, ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ರ (ರಿ). ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕೃತಿ, ಕಲೆಗೆ ಹೆಚ್ಚು ಮಹತ್ವ ನೀಡಿದೆ,ನಮ್ಮ ಗ್ರಾಮೀಣ ಜನಪದ ಕಲೆಗಳ ಸೊಗಡು ತುಂಬಾ ಅಭೂತ ಪೂರ್ವವಾದದು. ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಎನ್ನುವುದು ಬೂದಿ ಮುಚ್ಚಿದ ಕೆಂಡದಂತಿರುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಆತ್ಮ ಸಾಕ್ಷಿಯಾಗಿ ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದ ಅವರು, ನಿಮ್ಮ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಉಪನ್ಯಾಸಕರ ಹಾಗೂ ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು.
ಗೆಲುವು ಸೋಲುಗಳನ್ನು ನಮ್ಮ ಪ್ರಯತ್ನದ ಮೂಲಕ ನೋಡುತ್ತೇವೆ. ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸ್ಪರ್ಧೆಯನ್ನು ಸ್ಪರ್ಧೆಯಾಗಿ ನೋಡಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ,ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ. ಗುರುರಾಜ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಆಯೋಜಿಸಿದ್ದು, ಉತ್ತಮವಾಗಿ ನಡೆಸಿ ಕೊಡಲಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ವಾಸಪ್ಪ ಗೌಡ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ, ಎಸ್.ಎ.ವಿ. ಪಿಯು ಕಾಲೇಜಿನ ಭದ್ರಾವತಿಯ ಪ್ರಾಚಾರ್ಯರಾದ ಡಾ.ಹರಿಣಾಕ್ಷಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Sri Sri Sri Dr.Nirmalanandanatha Maha Swamiji ಸಂಜೆ 4 ಗಂಟೆಗೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ಪ್ರಬಾನ್ವಿತರಿಗೆ ಅತ್ಯಾಕರ್ಷಕ ಪ್ರಶಸ್ತಿ ಪತ್ರ, ಬಹುಮಾನಗಳನ್ನು ನೀಡಿ ಪೂಜ್ಯರಿಂದ ಗೌರವಿಸಲಾಯಿತು. ಸಮಗ್ರ ಪ್ರಶಸ್ತಿಯನ್ನು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು ಶರಾವತಿ ನಗರ ಶಿವಮೊಗ್ಗ ಇವರು ಪಡೆದುಕೊಂಡಿರುತ್ತಾರೆ.
ಕು. ಅನನ್ಯ ಪ್ರಾರ್ಥಿಸಿ. ಸೋಹನ್ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿ, ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿ. ಮುಖ್ಯ ಶಿಕ್ಷಕಿ ಸುಜಾತ ವಂದಿಸಿದರು.
ಬಾಕ್ಸ್:
ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಜ್ಞಾನದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿ ಕಾರ್ಯಕ್ರಮಗಳು ಅತ್ಯವಶ್ಯಕವಾಗಿವೆ. ನಮ್ಮ ನಾಡು,ನುಡಿ, ಸಾಹಿತ್ಯ, ಸಂಸ್ಕೃತಿ, ಪರಂಪರೆ,ಕಲೆ ಶ್ರೀಮಂತವಾಗಿದೆ. ಇಂದಿನ ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದು, ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಪರಂಪರೆಯನ್ನು ಉಳಿಸಬೇಕೆಂದರು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ . ಶಿವಮೊಗ್ಗ.
