ಕನ್ನಡ ನಾಡಿನ ಕಂಪು ಎಲ್ಲೆಡೆ ಪಸರಿಸಲಿ ಎಂದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಅಭಿಪ್ರಾಯಪಟ್ಟರು.
ಅವರು ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶರಾವತಿ ನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ನಾಡಗೀತೆಗೆ ನೂರರ ಸಂಭ್ರಮ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯವಹಿಸಿ ಮಾತನಾಡಿದರು.
ಕನ್ನಡ ನಾಡಿನ ಪರಂಪರೆಯ ಹೆಮ್ಮೆಯನ್ನು ಪ್ರತಿಬಿಂಬಿಸುವ ಕುವೆಂಪು ರಚಿಸಿದ ನಾಡಗೀತೆಗೆ ೧೦೦ ವರ್ಷ ತುಂಬಿದ ಸುಸಂದರ್ಭದಲ್ಲಿ ನೂರು ವಿದ್ಯಾರ್ಥಿಗಳ ನೂರು ಕಂಠಗಳ ಸಿರಿಯಿಂದ ಒಕ್ಕೂರಲ ಗಾಯನ ಮಾಡಲಾಯಿತು.
ಕನ್ನಡ ನಾಡು-ನುಡಿಗೆ ಅಪಾರ ಕೊಡುಗೆಯನ್ನು ನೀಡಿದ ಮಹಾನ್ ಕವಿಗಳ, ಜ್ಞಾನಪೀಠ ಪ್ರಶಸ್ತಿ ವಿಜೇತರ ವೇಷವನ್ನು ಧರಿಸಿದ ಮಕ್ಕಳೊಂದಿಗೆ ಜಾಥಾ ನಡೆಸಲಾಯಿತು .
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕನ್ನಡನಾಡಿನ ಕಂಪು ಎಲ್ಲೆಡೆ ಪಸರಿಸಲಿ- ಶ್ರೀನಾದಮಯಾನಂದನಾಥಶ್ರೀ
Date:
