Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ.3 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ “ ಸಾಮಾಜಿಕ ಪ್ರಗತಿಯನ್ನು ಸಾಧಿಸಲು ವಿಲಚೇತನರನ್ನು ಒಳಗೊಂಡ ಸಮಾಜವನ್ನು ರೂಪಿಸುವುದು” ಎಂಬ ಘೋಷವಾಕ್ಯದಡಿ 2025 ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ಸಚಿವೆಯಾದ ಲಕ್ಷ್ಮಿ
ಆರ್.ಹೆಬ್ಬಾಳ್ಕರ್, ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
Women and Child Development Department ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಸಿಬ್ಬಂದಿಗಳು, ವಿವಿಧ ಸಂಘಗಳ ಮುಖ್ಯಸ್ಥರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
Women and Child Development Department ಡಿಸೆಂಬರ್ 3. ವಿಶ್ವವಿಕಲಚೇತನರ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು
Date:
