Dinesh Gundu Rao ಶಿವಮೊಗ್ಗ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಅಗತ್ಯವಾದ ಎಲ್ಲ ಕ್ರಮ ವಹಿಸಬೇಕು. ಜೊತೆಗೆ ಲಿಂಗಾನುಪಾತ ಸಮತೋಲನವಾಗಿರುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಹೆಚ್ ಓ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಸ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಹೈರಿಸ್ಕ್ ಗರ್ಭಿಣಿಯರ ಕುರಿತು ಕಡ್ಡಾಯವಾಗಿ ಶೇ.100 ಟ್ರಾಕ್ ಆಗಬೇಕು. ಎಎನ್ ಸಿನೋಂದಣಿ ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಆಗುವಂತೆ ನೋಡಿಕೊಳ್ಳಬೇಕು. ತಾಯಿ ಮರಣ ಪ್ರಮಾಣ 80 ಇದ್ದು ಹೊರ ಜಿಲ್ಲೆಗಳ ಗಂಭೀರ ಪ್ರಕರಣಗಳಿಂದಾಗಿ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಶಿಶು ಮರಣ 15.1 ಇದ್ದು, ಕಳೆದ ಸಾಲಿಗಿಂತ ಕಡಿಮೆ ಆಗಿದೆ. ತಾಯಿ ಮತ್ತು ಶಿಶು
ಮರಣ ಪ್ರಮಾಷ ರಾಜ್ಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ಕಡಿತಗೊಳಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಲಿಂಗಾನುಪಾತ ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ಕಡಿಮೆ ಇದ್ದು ಯಾಕೆಂದು ತಿಳಿದು ಕ್ರಮ ವಹಿಸಬೇಕು. ಲಿಂಗ ಪತ್ತೆ ಹಚ್ಚುವ ಕಾರ್ಯವೆಲ್ಲಾದರೂ ನಡೆಯುತ್ತಿದೆಯೋ ಎಂದು ಪತ್ತೆ ಹಚ್ಚಬೇಕು. ಎಎನ್ಸಿ ನೋಂದಣಿ ಕಡ್ಡಾಯವಾಗಿ ಮಾಡಿಸಿ. ವಿಳಂಬ ನೋಂದಣಿಯಲ್ಲಿ ಲಿಂಗಾನುಪಾತ ಪತ್ತೆ ಹಚ್ಚಿ ವರದಿ ನೀಡುವಂತೆ ತಿಳಿಸಿದರು.
ಸಿಹೆಚ್ ಸಿ ಗಳಲ್ಲಿ ಹೆರಿಗೆ ಪ್ರಮಾಣ ಕಡಿಮೆ ಇದೆ. ಹೆರಿಗೆ ಅತಿ ಕಡಿಮೆ ಇರುವ ಸಿಹೆಚ್ ಸಿಯಿಂದ ಪ್ರಸೂತಿ ಮತ್ತು ಅರವಳಿಕೆ ತಜ್ಞ ವೈದ್ಯರನ್ನುತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸಿ 24/7 ಕೆಲಸ ಮಾಡುವಂತೆ ಕ್ರಮವಹಿಸಬಹುದು ಎಂದ ಅವರು ತಾಲ್ಲೂಕು ಆಸ್ಪತ್ರೆಗಳನ್ನು ಹೆಚ್ಚಿನ ಮಟ್ಟದಲ್ಲಿ ಸುಧಾರಣೆ ಮಾಡಬೇಕು. ಆಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೂ ಹೊರೆ ಕಡಿಮೆ ಆಗುತ್ತದೆ ಎಂದರು.
ಜಿಲ್ಲೆಯಲ್ಲಿ 14887 ಹೆರಿಗೆ ಆಗಿದ್ದು, 52.21 % ಸಿಜೇರಿಯನ್ ಶಸ್ತ್ರ ಚಿಕಿತ್ಸೆ ನಡೆದಿದೆ. ಜಿಲ್ಲೆಯಲ್ಲಿ ಎಂಆರ್ ೧, ೨ ನೇ ಡೋಸ್ ಲಸಿಕೆ 91% ಆಗಿದೆ. ರಾಜ್ಯ ಸರಾಸರಿ 95% ಇದ್ದು, 95% ಆಗುವಂತೆ ಕ್ರಮಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಯಲ್ಲಿ ನೀಡುತ್ತಿರುವ ಎಂ ಆರ್ ಲಸಿಕೆ ಪ್ರಮಾಣವನ್ನೂ ಪರಿಶೀಲಿಸುವಂತೆ ಸೂಚಿಸಿದರು.
ನಮ್ಮ ಕ್ಲಿನಿಕ್ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಎಎಂಪಿಕೆ (ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ) ಕಾರ್ಯಕ್ರಮದಡಿ 5 ರಿಂದ 19 ರ್ಷದೊಳಗಿನ ಶಾಲಾ- ಕಾಲೇಜಿನ 114196
ಮಕ್ಕಳನ್ನು ತಪಾಸಣೆಗೆ ಒಳಡಿಸಿದ್ದು, 6.5 % ತೀವ್ರವಲ್ಲದ(ಮೈಲ್ಡ್) 5.7% ಮಧ್ಯಮ(ಮಾಡರೇಟ್) ಮತ್ತು , 0.04 ತೀವ್ರ (ಸಿವಿಯರ್) ಅನಿಮಿಯಾ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದು, ಚಿಕಿತ್ಸೆ ಮುಗಿದ ನಂತರ ಮುಂದಿನ ತಿಂಗಳು ವರದಿ ನೀಡಿ ಎಂದರು.
Dinesh Gundu Rao ಗೃಹ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯಲ್ಲಿಆಗಸ್ಟ್ ಯಿಂದ ಸೆಪ್ಟೆಂಬರ್ವರೆಗೆ ಸಕ್ಕರೆ ಖಾಯಿಲೆ 178, ಕಿಡ್ನಿ ಖಾಯಿಲೆ 147, ಸಿಒಪಿಡಿ 36, ಅನೀಮಿಯಾ 97, ಸ್ತನ ಕ್ಯಾನ್ಸರ್ 16, ಗರ್ಭಗೊರಳಿನ ಕ್ಯಾನ್ಸರ್ 4 ಸೇರಿದಂತೆ ವಿವಿಧ ಖಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ಮತ್ತು ಸಲಹೆ ನೀಡಲಾಗುತ್ತಿದೆ. 14 ಆರೋಗ್ಯ ಸಮಸ್ಯೆಗಳನ್ನು ತಪಾಸಣೆಗೊಳಪಡಿಸಿ ರೋಗಿಗಳಿಗೆ ದೀರ್ಘಕಾಲದ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಗೃಹ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದು ಬೇರೆ ಯಾವ ರಾಜ್ಯದಲ್ಲೂ ಇಂತಹ ಕಾರ್ಯ ಇಲ್ಲ. ಮನೆ ಮನೆಗೆ ತೆರಳಿ ಈ ಕಾರ್ಯಕ್ರಮವನ್ನು ಪರಿಣಾಮಕಾರಿಗೊಳಿಸಬೇಕು. ಸಕ್ಕರೆ ಖಾಯಿಲೆ ಮತ್ತು ಹೈಪರ್ ಟೆನ್ಶನ್ ಸಮಸ್ಯೆಗಳನ್ನು ಸಮರ್ಪಕವಾಗಿ ಸ್ಕ್ರೀನಿಂಗ್ ಮಾಡಬೇಕೆಂದು ಸೂಚನೆ ನೀಡಿದರು.
ಡಾ. ಪುನೀತ್ ಹೃದಯ ಜ್ಯೋತಿ ಕಾರ್ಯಕ್ರಮದಡಿ ಎಐ ಮೂಲಕ ಹೃದಯ ಖಾಯಿಲೆ ಪತ್ತೆ ಮಾಡಿ, ಗಂಭೀರವಾಗಿದ್ದರೆ ವೈದ್ಯರಿಗೆ ರೆಫರ್ ಮಾಡಿ ಚಿಕಿತ್ಸೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಹಲವಾರು ಜೀವ ಉಳಿಸಲಾಗಿದ್ದು ಈ ಬಾರಿ
ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೂ ಈ ಕಾರ್ಯಕ್ರಮ ವಿಸ್ತರಿಸಲಾಗುವುದು ಎಂದರು.
ಕೆಎಫ್ ಡಿ ಎಚ್ಚರ ವಹಿಸಿ :
ಈ ಬಾರಿ ಕೆಎಫ್ ಡಿ ನಿಯಂತ್ರಣಕ್ಕೆ ಅತಿ ಎಚ್ಚರಿಕಯಿಂದ ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದು ಸಚಿವರು ಸೂಚನೆ ನೀಡಿದರು.
2025 ನೇ ಸಾಲಿನಿಂದ ಇಲ್ಲಿಯವರೆಗೆ ಕೆಎಫ್ ಡಿ ಪತ್ತೆಗೆ 7155 ಪರೀಕ್ಷೆ ನಡೆಸಲಾಗಿದ್ದು 72 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 02 ಮರಣ ಸಂಭವಿಸಿರುತ್ತದೆ. 450 ಉಣ್ಣೆ ಸಂಗ್ರಹ, 229 ಮಂಗಗಳ ಸಾವು ಸಂಭವಿಸಿದೆ ಎಂದು ವಿಡಿಎಲ್ ನ ಡಿಸಿಎಂಒ ಡಾ.ಹರ್ಷವರ್ದನ್ ತಿಳಿಸಿದರು.
ಸಚಿವತು, ಮಂಗನ ಸಾವು ಕುರಿತು ಕೂಡಲೇ ವರದಿ ಮಾಡಬೇಕು. ಕೆಎಫ್ ಡಿ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ಕ್ರಮವಹಿಸಬೇಕು.ಈ ವರ್ಷ ಬಹಳ ಜಾಗೃತೆಯಿಂದ ಇದ್ದು ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಕೆಎಫ್ ಡಿ ಪರೀಕ್ಷೆಗೆ ಶಿರಸಿ ಯಲ್ಲಿ ಪ್ರಯೋಗಾಲಯ ಆರಂಭಿಸಲು ಅನುಮತಿ ದೊರೆತಿದ್ದು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಈವರೆಗೆ 143 ಡೆಂಗಿ, ಚಿಗುನ್ ಗುನ್ಯ 64 ಮತ್ತು ಮಲೇರಿಯಾ 31 ಪ್ರಕರಣಗಳು ದಾಖಲಾಗಿದೆ. ಟಿಬಿ ಪರೀಕ್ಷೆಯಲ್ಲಿ
99% ಪ್ರಗತಿ ಸಾಧಿಸಲಾಗಿದ್ದು 1492 ಜನ ಚಿಕಿತ್ಸೆಯಲ್ಲಿದ್ದಾರೆ.
ಕುಷ್ಟರೋಗ 32 ಪಾಸಿಟಿವ್ ಇದಗದು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ 72% ಸಾಧನೆ ಮಾಡಲಾಗಿದೆ.
ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಕನ್ನಡಕ ನೀಡುವ ಆಶಾಕಿರಣ ಕೇಂದ್ರಗಳನ್ನು ರಾಜ್ಯಾದ್ಯಂತ ತೆರೆಯಲಾಗಿದ್ದು ಜಿಲ್ಲೆಯ ೧೪ ಕಡೆ ಮತ್ತು ರಾಜ್ಯದಲ್ಲಿ 398 ಕೇಂದ್ರಗಳನ್ನು ತೆರೆಯಲಾಗಿದೆ.
ಎಲ್ಲ ತಾಲ್ಲೂಕು ಆಸ್ಪತ್ರಯಲ್ಲಿ ಇಬ್ಬರು ಪ್ರಸೂತಿ ಮತ್ತು ಅರವಳಿಕೆ ತಜ್ಞರು ನೇಮಕ ಮಾಡಲುಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿಎನ್ ಸಿಡಿ ಉಪನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ.ರಘುನಂದನ್,
ಡಿಹೆಚ್ ಒ ಡಾ.ನಟರಾಜ್, ಎನ್ ವಿಬಿಡಿಸಿಪಿ ಅಧಿಕಾರಿ ಡಾ.ಗುಡುದಪ್ಪ ಕಸಬಿ, ಡಿಎಸ್ ಓ ಡಾ.ನಾಗರಾಜ ನಾಯ್ಕ್ , ಆರ್ ಸಿ ಹೆಚ್ ಒ ಡಾ.ಮಲ್ಲಪ್ಪ, ಡಿಎಲ್ ಒ ಡಾ.ಕಿರಣ್,
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಜರಿದ್ದರು.
