Vishvesvaraya Iron and Steel Factory ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಹಾಗೂ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಆವರಣದ ಕಚೇರಿಯಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಶಿವಮೊಗ್ಗ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದರು.
Vishvesvaraya Iron and Steel Factory ಈ ಸಂದರ್ಭದಲ್ಲಿ ಶಾಸಕರುಗಳಾದ ಶ್ರೀಮತಿ ಶಾರದಾ ಪೂರ್ಯನಾಯಕ್, ಶ್ರೀ ಭೋಜೆಗೌಡ, ಶ್ರೀ ಮಂಗೋಟೆ ರುದ್ರೇಶ್, ಶ್ರೀ ಧರ್ಮ ಪ್ರಸಾದ್, ಶ್ರೀಮತಿ ಶಾರದಾ ಅಪ್ಪಾಜಿ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
