S.N. Channabasappa ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ವಿ. ರಶ್ಮಿ ಮಹೇಶ್ ಅವರನ್ನು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಚೇರಿಯಲ್ಲಿ ಭೇಟಿಯಾಗಿ, ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವಂತಹ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಪದವಿ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವಂತಹ ಜಾಗದ ಲಭ್ಯತೆಗೆ ಸಂಬಂಧಿಸಿದಂತೆ ಈ ಸಂದರ್ಭದಲ್ಲಿ ಮಹತ್ವದ ಚರ್ಚೆ ನಡೆಸಿದರು. ಈಗಾಗಲೇ ನಗರದಲ್ಲಿ ಗುರುತಿಸಲಾಗಿರುವ ಪ್ರೌಢ ಶಾಲಾ ಇಲಾಖೆಯ ವ್ಯಾಪ್ತಿಯ ಜಾಗವನ್ನು ಕಾಲೇಜು ಶಿಕ್ಷಣ ಇಲಾಖೆಗೆ ತ್ವರಿತವಾಗಿ ವರ್ಗಾಯಿಸುವಂತೆ ಕೋರಿ ಅಧಿಕೃತ ಮನವಿ ಸಲ್ಲಿಸಿದರು.
ಮನವಿಯನ್ನು ಆಲಿಸಿದ ಪ್ರಧಾನ ಕಾರ್ಯದರ್ಶಿಗಳು, ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಯೋಜನೆಯ ಮಹತ್ವವನ್ನು ಮನಗಂಡು, ಜಾಗದ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖಾ ಮಟ್ಟದಲ್ಲಿ ಸಕ್ರಿಯವಾಗಿ ಕ್ರಮ ಕೈಗೊಳ್ಳಲು ಮತ್ತು ಅಗತ್ಯ ಸಮ್ಮತಿಯನ್ನು ನೀಡಲು ಒಪ್ಪಿಗೆ ಸೂಚಿಸಿದರು.
S.N. Channabasappa ಭೇಟಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿಎಸ್ ಅರುಣ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.
