Chamber of Commerce Shivamogga ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ ಮತ್ತು ಕೆಸಿಟಿಯು ಬೆಂಗಳೂರು ಹಾಗೂ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಇವರ ಸಹಯೋಗದೊಂದಿಗೆ ಡಿ.4 ಬೆಳಿಗ್ಗೆ 10.30 ಕ್ಕೆ ಸಾಗರ ರಸ್ತೆಯಲ್ಲಿರುವ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಎಂಎಸ್‌ಎಂಇಗಳ ಕಾರ್ಯಕ್ರಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯಡಿ ಇನ್‌ಕ್ಯೂಬೆಷನ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಜೋಯಿಸ್ ರಾಮಾಚಾರ್ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಅಧ್ಯಕ್ಷೆತೆಯನ್ನು ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲರು ಡಾ.ಸ್ವಾಮಿ ಡಿ.ಆರ್ ವಹಿಸಿರುವರು.
Chamber of Commerce Shivamogga ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜಕ ಡಾ.ನಾಗರಾಜ.ಆರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್, ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ.ಪಿ ಗೌರವಾನ್ವಿತ ಉಪಸ್ಥಿತಿ ವಹಿಸಿಲಿದ್ದು, ಜಿಲ್ಲಾ ಕೈಗಾರಿಕಾ ಕೇಂದ್ರ ಉಪ ನಿರ್ದೇಶಕ ಹೆಚ್.ಸುರೇಶ್, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಧ್ಯಪಕರಾ ಡಾ.ಅರ್ಜುನ್.ಯು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು.
