Monday, May 4, 2026
Monday, May 4, 2026

ಶಿವಮೊಗ್ಗದಲ್ಲಿ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮ ಯಶಸ್ವಿ

Date:

ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 200 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಧ್ಯೇಯದೊಂದಿಗೆ ಅನವರತ ಫೌಂಡೇಶನ್ ಹಮ್ಮಿಕೊಂಡಿದ್ದ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮವು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಶಿಕ್ಷಣದ ಮೂಲಕ ಸಾಮಾಜಿಕ ಪ್ರಗತಿಗೆ ನಿರಂತರ ಬೆಂಬಲ ನೀಡುವ ಗುರಿಯನ್ನು ಈಡೇರಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ, ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಒಟ್ಟು 200 ವಿದ್ಯಾರ್ಥಿಗಳಿಗೆ ವಿದ್ಯಾನಿಧಿಯನ್ನು ವಿತರಿಸಲಾಯಿತು.

ಈ ಮೂಲಕ ಅವರ ಶೈಕ್ಷಣಿಕ ಕನಸುಗಳಿಗೆ ಸಂಸ್ಥೆಯು ಭದ್ರ ಬುನಾದಿ ಒದಗಿಸಿತು.

ಅನವರತ ಫೌಂಡೇಶನ್‌ನ ಈ ಮೊದಲ ಹೆಜ್ಜೆ, ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸುವ ದಿಸೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ.

ಎಸ್ ಎನ್ ಚನ್ನಬಸಪ್ಪ (ಚೆನ್ನಿ)ನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಬಿ ವಿ ವಸಂತ್ ಕುಮಾರ್ , ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಎಸ್ ಎನ್ ನಾಗರಾಜ್ , ಶ್ರೀ ಡಿಎಸ್ ಅರುಣ್ , ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ , ವಿಧಾನಪರಿಷತ್ ಶಾಸಕರಾದ ಶ್ರೀ ಎ.ಜೆ ರಾಮಚಂದ್ರ , ವಿಕಾಸ ವಿದ್ಯಾ ಸಮಿತಿಯ ಕಾರ್ಯದರ್ಶಿಗಳಾದ
ಶ್ರೀ ಎಸ್ ರಾಜಶೇಖರ್ , ದೇಶಿಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಅನವರತ ಫೌಂಡೇಶನ್‌ನ ಈ ಸಾಮಾಜಿಕ ಕಳಕಳಿಯ ಕಾರ್ಯವನ್ನು ಶ್ಲಾಘಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಮಹತ್ವದ ಕುರಿತು ಪ್ರೇರಣಾತ್ಮಕ ಮಾತುಗಳನ್ನಾಡಿದರು.

ಮುಂದಿನ ದಿನಗಳಲ್ಲಿ “ವಿವೇಕ ವಿದ್ಯಾನಿಧಿ” ಕಾರ್ಯಕ್ರಮವನ್ನು ವಿಸ್ತರಿಸುವ ಮೂಲಕ ಇನ್ನಷ್ಟು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮಹತ್ವಾಕಾಂಕ್ಷೆಯನ್ನು ಅನವರತ ಫೌಂಡೇಶನ್ ವ್ಯಕ್ತಪಡಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...