Thursday, September 17, 2026
Thursday, September 17, 2026

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸ್ವ ಉದ್ಯೋಗ ಯೋಜನೆ ಪ್ರಕಟಣೆ

Date:

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ ತಿಂಗಳ ಡಿ.22 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ ಡಿ 15 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು.

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ.15 ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...