Monday, February 2, 2026
Monday, February 2, 2026

ಶಿವಮೊಗ್ಗದಲ್ಲಿ ಖ್ಯಾತ ವೈದ್ಯೆ ತಾಯಿ ಮತ್ತು ಪುತ್ರ ನೇಣಿಗೆ ಶರಣು

Date:

ಶಿವಮೊಗ್ಗ ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ‌ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.

ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್‌ ಅವರಿಗೆ ಕಳೆದ ಮೇ ತಿಂಗಳಲ್ಲಿ ಮತ್ತೊಂದು ಮದುವೆ ಆಗಿತ್ತು. ಆಕಾಶ್ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.

‘ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು ಎಂಬುದು ಸ್ಥಳದಲ್ಲಿ ದೊರೆತ ಡೆತ್‌ನೋಟ್‌ನಲ್ಲಿ ವ್ಯಕ್ತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...