Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ ಜೊತೆಗೆ ಇಡೀ ಸಮಾಜವನ್ನು ಅಭಿವೃದ್ದಿಯೆಡೆ ಕೊಂಡೊಯ್ಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ನುಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.09 ರಂದು ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಚಿಗುರು 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಕ್ಕಳ ಉತ್ಸಾಹ-ಹುರುಪು ನೋಡಿದರೆ ನಮಗೆ ಮತ್ತೊಮ್ಮೆ ಬಾಲ್ಯಾವಸ್ಥೆಗೆ ಹೋಗಬೇಕು ಎನ್ನಿಸುತ್ತಿದೆ.
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಮುಖ್ಯವಾಗಿ ಜೀವಿಸುವ, ರಕ್ಷಣೆಯ, ಭಾಗವಹಿಸುವ ಮತ್ತು ಪ್ರಗತಿ ಹೊಂದುವ ಈ ನಾಲ್ಕು ಹಕ್ಕುಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಹೀಗೆ ಈ ಅಂಶಗಳನ್ನೊಳಗೊAಡು ಮುನ್ನಡೆಯಲು ಮಕ್ಕಳು ಸಮರ್ಪಕ ಆಹಾರ, ದೇಹ ದಣಿಯುವ ಆಟ ಮತ್ತು ಪಾಠದಲ್ಲೂ ಮುಂದಿರಬೇಕು. ಈ ರೀತಿಯಾಗಿ ಮಕ್ಕಳು ತಾವು ಪ್ರಗತಿ ಹೊಂದುವ ಜೊತೆಗೆ ಇಡೀ ಸಮಾಜವನ್ನು ಅಭಿವೃದ್ದಿಯೆಡೆ ಕೊಂಡೊಯ್ಯಬಹುದು ಎಂದರು.
ಇಂದಿನ ಚಿಗುರು ಕಾರ್ಯಕ್ರಮದಲ್ಲಿನ ಸ್ಪರ್ಧೆಗಳು ಆಟ ಅನ್ನುವ ಅಂಶಕ್ಕೆ ಸೇರಿದ್ದು ಸ್ಪರ್ಧಾತ್ಮಕ ಮನೋಭಾವದಿಂದ ಮಕ್ಕಳು ಪಾಲ್ಗೊಳ್ಳಬೇಕು. ಗಮನ ಕೇಂದ್ರೀಕರಿಸಿ ಭಾಗವಹಿಸುವ ಪ್ರತಿ ಸ್ಪರ್ಧಾಳು ವಿಜೇತರಾದಂತೆ ಎಂದ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಂತಹ ವೇದಿಕೆಯನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿರಿ ಎಂದು ಮಕ್ಕಳಿಗೆ ಕರೆ ನೀಡಿದರು.
Shimoga News ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಮಾತನಾಡಿ, ಮಕ್ಕಳು ತಮ್ಮಲ್ಲಿರುವ ವಿವಿಧ ಪ್ರತಿಭೆಗಳನ್ನು ಅನಾವರಣಗೊಳಿಸಲು ಇದೊಂದು ಅತ್ಯುತ್ತಮ ವೇದಿಕೆಯಾಗಿದ್ದು, ಮಕ್ಕಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ರಾಷ್ಟç ಮಟ್ಟದವರೆಗೆ ಗುರುತಿಸಿಕೊಂಡು ಜಿಲ್ಲೆಗೆ ಕೀರ್ತಿ ತರಬೇಕೆಂದು ಹಾರೈಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಮಾತನಾಡಿ ಚಿಗುರು ಕಾರ್ಯಕ್ರಮದಲ್ಲಿ 6 ರಿಂದ 14 ವರ್ಷದೊಳಗಿನ ಮಕ್ಕಳು ಪಾಲ್ಗೊಳ್ಳಬಹುದಾಗಿದ್ದು ಹಿಂದೂಸ್ತಾನಿ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಮತ್ತು ಕರ್ನಾಟಕ ವಾದ್ಯ ಸಂಗೀತ, ಸುಗಮ ಸಂಗೀತ, ಜಾನಪದಗೀತೆ, ಸಮೂಹ ನೃತ್ಯ, ಯಕ್ಷಗಾನ, ಏಕಪಾತ್ರಭಿನಯ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಇಂದಿನ ಚಿಗುರು ಕಾರ್ಯಕ್ರಮದಲ್ಲಿ ಸುಮಾರು 60 ರಿಂದ 70 ಮಕ್ಕಳು ಪಾಲ್ಗೊಂಡಿದ್ದಾರೆAದರು.
ರಂಗಾಯಣದ ಆಡಳಿತಾಧಿಕಾರಿ ಶೈಲಜಾ ಎ ಸಿ, ಶಿವಮೊಗ್ಗ ತಾಲ್ಲೂಕು ಸಿಡಿಪಿಓ ಗಂಗಾಬಾಯಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಸ್ಪರ್ಧಾಳುಗಳು, ವಿದ್ಯಾರ್ಥಿಗಳು ಹಾಜರಿದ್ದರು.

