ಶಿವಮೊಗ್ಗ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ 2025-26ನೇ ಸಾಲಿನಲ್ಲಿ ಶಿವಮೊಗ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಡಿ. 12 ರಂದು ಬೆಳಗ್ಗೆ 9.30ನ ರಿಂದ ಬಿ.ಹೆಚ್.ರಸ್ತೆಯ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ (ಕರ್ನಾಟಕ ಸಂಘದ ಪಕ್ಕ) ಆವರಣದಲ್ಲಿ 1-12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳ ವಿಶೇಷ ಚೇತನ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ವೈದ್ಯರಿಂದ ಶಿಫಾರಸ್ಸಾದ ಮಕ್ಕಳಿಗೆ ಸಾಧನ-ಸಲಕರಣೆಗಳನ್ನು ನೀಡಲಾಗುತ್ತಿದ್ದು, ವಿಶೇಷ ಚೇತನ ಮಕ್ಕಳ ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಬಿ.ಇ.ಓ ರಮೇಶ್ ಹಾಗೂ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ತಿಳಿಸಿದ್ದಾರೆ.
