DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ ದೈನಂದಿನ ಒತ್ತಡದಿಂದ ಹೊರಬಂದು ಕ್ರೀಡೆ, ಮನೋರಂಜನೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಕಾರ್ಯಕ್ಷೇತ್ರದಲ್ಲಿ ಇನ್ನಷ್ಟು ಹೊಸತನದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ.
ಈ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಡಿಸೆಂಬರ್12 ಮತ್ತು 13ರಂದು ಕಂದಾಯ ಇಲಾಖಾ ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಂದಾಯ ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಡಿಸೆಂಬರ್12ರಂದು ಪಿ.ಇ.ಎಸ್.ಇಂಜಿನಿಯರಿಂಗ್‌ಕಾಲೇಜಿನ ಅಬ್ದುಲ್‌ಕಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಡಿಸೆಂಬರ್13ರಂದು ರಾಜ್ಯ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಸಂಗೀತ ನೃತ್ಯ ಮುಂತಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದವರು ವಿವರಿಸಿದರು. ಡಿ.12ರಂದು ಬೆಳಿಗ್ಗೆ 08ಗಂಟೆಗೆ ಪಿ.ಇ.ಎಸ್.ಇಂಜಿನಿಯರಿಂಗ್‌ಕಾಲೇಜಿನ ಅಬ್ದುಲ್‌ಕಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿ, ಪ್ರೊಬೇಷನರ್‌ಅಧಿಕಾರಿ ನಾಗೇಂದ್ರಬಾಬು ಕುಮಾರ್‌ಅವರು ಉಪಸ್ಥಿತರಿರುವರು.
ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ, ಸಾಗರ ಉಪವಿಭಾಗಾಧಿಕಾರಿ ವೀರೇಶ ಕುಮಾರ್‌ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಡಿ.13ರಂದು ಸಂಜೆ 6ಗಂಟೆಗೆ ನಗರದ ಬಸವನಗುಡಿಯಲ್ಲಿರುವ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಕಂದಾಯೋತ್ಸವದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.
DC Shivamogga ಈ ಕಾರ್ಯಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು.
