ಡೆವಿಲ್ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ
ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಅಫಘಾತದಲ್ಲಿ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್
ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ
ರಾಜಹಂಸ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸಾವಿಗೀಡಾಗಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
