Thursday, March 19, 2026
Thursday, March 19, 2026

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

Date:

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಸಭೆ ನಡೆಸಿದರು
ಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಸನ್ಮಾನಿಸಿ, ಧನ್ಯವಾದ ಸಲ್ಲಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ ಮಾತುಗಳು:

  • ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು.
  • ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5 ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ.
  • ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಮಾಡುವ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
  • ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.
  • ನೀರಾವರಿಗೆ ವಿದ್ಯುತ್‌ ಸಮಸ್ಯೆಯಿದ್ದು, 12 ತಾಸು ನಿರಂತರ ವಿದ್ಯುತ್‌ ಪೂರೈಕೆ ಮಾಡಬೇಕು, ಅಕ್ರಮ – ಸಕ್ರಮ ಯೋಜನೆಯನ್ನು ಪುನಾರಂಭಿಸಬೇಕು, ಕಾಡುಪ್ರಾಣಿಗಳಿಂದ ಬೆಳೆ ಹಾನಿ ಪರಿಹಾರ ಧನ ಹೆಚ್ಚಿಸಬೇಕು. ರೈತರ ಉತ್ಪನ್ನಗಳ ಖರೀದಿಗೆ ಕಾರ್ಪಸ್‌ ಫಂಡ್‌ ಆರಂಭಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಪಶು ವೈದ್ಯರ ನೇಮಕ ಮಾಡಬೇಕು. ಬೆಳಗಾವಿಯಲ್ಲಿ ಆರಂಭಿಸಲಾಗಿರುವ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ರೈತ ಪ್ರತಿನಿಧಿಗಳು ಮನವಿ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಲಾಗುವುದು.
  • ರೈತರಿಗೆ 7 ಗಂಟೆ ಕಾಲ ನಿರಂತರ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧವಾಗಿದೆ. ವಿದ್ಯುತ್‌ ಉತ್ಪಾದನೆ ಹೆಚ್ಚಾದಾಗ ವಿದ್ಯುತ್‌ ಪೂರೈಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.
  • ರೈತರ ವಿಷಯದಲ್ಲಿ ಸರ್ಕಾರ ಯಾವುದೇ ಆತ್ಮವಂಚನೆ ಮಾಡುವುದಿಲ್ಲ. ನಮ್ಮ ಸರ್ಕಾರ ರೈತ ಪರವಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳಿಗೂ ನ್ಯಾಯಯುತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...