Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “ಜ್ಞಾನ ಸಂಗಮ” ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ವಿಭಾಗ ಮಟ್ಟದ (ಬೆಳಗಾವಿ, ಚಿಕ್ಕೋಡಿ, ಕಾರವಾರ, ಶಿರಸಿ) ಸಂಪನ್ಮೂಲ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ,ಶಾಲಾ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಮಾತನಾಡಿದರು.
ರಾಜ್ಯದಲ್ಲಿ ಉತ್ತಮ ಶಿಕ್ಷಕರಿರುವುದೇ ಸರ್ಕಾರಿ ಶಾಲೆಗಳಲ್ಲಿ ಆದ್ದರಿಂದ ನಿಮ್ಮೆಲ್ಲರ ಸಹಕಾರದೊಂದಿಗೆ ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಸುಧಾರಣೆಯಾಗಬೇಕು. ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿ ತಮ್ಮ ತಮ್ಮ ಶಾಲೆಗಳಲ್ಲಿ ಅನುಷ್ಠಾನ ಮಾಡಬೇಕು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಿ, ಮಕ್ಕಳ ಪಟ್ಟಿ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಗಮನ ಹರಿಸಿ, ತರಬೇತಿ ನೀಡಬೇಕು. ಪರೀಕ್ಷೆಯಲ್ಲಿ ಬರಬಹುದಾದ ಸಂಭಾವ್ಯ ಪ್ರಶ್ನೆಗಳ ಬಗ್ಗೆ ತಿಳಿ ಹೇಳಬೇಕು. ಹಳೆ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿ ವಿವರಿಸಬೇಕು ಮತ್ತು ವಿದ್ಯಾರ್ಥಿಗಳು ಸುಲಭವಾಗಿ ಕಲಿಯುವಂತೆ ಮತ್ತು ಅರ್ಥವಾಗುವಂತೆ ಕಲಿಕಾ ವಿಧಾನದಲ್ಲಿ ತಿಳಿಸಬೇಕು.
ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಮಧು ಬಂಗಾರಪ್ಪ ಕರೆ ನೀಡಿದರು.
Visvesvaraya Technological University ಕಾರ್ಯಾಗಾರದಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಿ. ರಶ್ಮಿ ಮಹೇಶ್, ಧಾರವಾಡ ಅಪರ ಆಯುಕ್ತರಾದ ಶ್ರೀ ಈಶ್ವರ್ ಉಳ್ಳಾಗಡ್ಡಿ, ಡಿ.ಎಸ್.ಇ.ಆರ್.ಟಿ ನಿರ್ದೇಶಕರಾದ ಶ್ರೀ ಹೆಚ್.ಎನ್ ಗೋಪಾಲಕೃಷ್ಣ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.
