Wednesday, September 16, 2026
Wednesday, September 16, 2026

Department of Kannada and Culture ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ

Date:

Department of Kannada and Culture ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಸ್ತುತ ಕಷ್ಟದ ಪರಿಸ್ಥಿತಿಯಲ್ಲಿರುವ 11,154 ಕಲಾವಿದರು, ಸಾಹಿತಿಗಳಿಗೆ ತಿಂಗಳಿಗೆ ರೂ. 2500 ದಂತೆ ಮಾಸಾಶನ ನೀಡಲಾಗುತ್ತಿದೆ. ಅಲ್ಲದೆ 410 ಜನ ಮೃತ ಕಲಾವಿದರ ಪತ್ನಿಯರಿಗೂ ಮಾಸಿಕ 500 ರೂ. ಮಾಸಾಶನ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನವರೆಗೂ ಮಾಸಾಶನ ಪಾವತಿಸಲಾಗಿದೆ. ಮಾಸಾಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ 1896 ಕಲಾವಿದರು, ಸಾಹಿತಿಗಳಿಗೂ ಕೂಡ ಮಾಸಾಶನ ಮಂಜೂರು ಮಾಡಲಾಗಿದೆ.

Department of Kannada and Culture ಜಾನಪದ ಜಾತ್ರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿಲ್ಲ. ಈ ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು, ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಚಿತ್ರದುರ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ದಿನಾಂಕಗಳನ್ನು ಶೀಘ್ರ ನಿಗದಿಪಡಿಸಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ. ಅಶ್ವತ್ಥ ನಾರಾಯಣ ಹಾಗೂ ಆರ್ ಅಶೋಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರ ಉತ್ತರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...