ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್ ಭತ್ತ ಸುಟ್ಟು ಭಸ್ಮವಾಗಿದೆ.
ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಬಿಲ್ಗುಣಯಲ್ಲಿ ಈ ಘಟನೆ ನಡೆದಿದೆ.
ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ
ಕಂಬದಿಂದ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ
ಭತ್ತದ ಹೊರೆಗಳು
ಬೆಂಕಿ ಹೊತ್ತಿಕೊಂಡು ಉರಿದಿವೆ.
ತಮ್ಮಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶದಿಂದ
ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವರದಿಯಾಗಿದೆ.
ನಿನ್ನೆ ಮಧ್ಯಾಹ್ನ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗ್ರಾಮಸ್ಥರು
ಗಂಭೀರ ಆರೋಪಮಾಡಿದ್ದಾರೆ.
