Sunday, May 3, 2026
Sunday, May 3, 2026

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

Date:

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕಾರಣಿಗಳು, ಮಾಜಿ ಸಚಿವರು ಮತ್ತು ಪ್ರಭಾವಿ ರಾಜಕೀಯ ಧುರೀಣರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ಅಗಲಿಕೆಯ ಸುದ್ದಿ ಅತೀವ ಆಘಾತವನ್ನು ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.

ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಇಡೀ ಸಮಾಜಕ್ಕೆ ಅವರ ನೇತೃತ್ವ, ಮಾರ್ಗದರ್ಶನ, ಅವರ ಕೊಡುಗೆ ಅಸಾಧಾರಣವಾದದ್ದು. ನಾಡಿನ ರಾಜಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಪಕ್ಷಾತೀತವಾಗಿ ಅವರು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಸಮಾಜ ತನ್ನ ಮೇರು ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನಮ್ಮ ಕುಟುಂಬದ ಒಬ್ಬ ಹಿರಿಯರನ್ನು ಕಳೆದುಕೊಂಡ ದುಃಖ ನಮಗಾಗಿದೆ ಎಂದಿದ್ದಾರೆ.

B.Y. Raghavendra ವಿಶೇಷವಾಗಿ, ಅವರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿವೆ. ಸಾವಿರಾರು ಜನರಿಗೆ ಆರೋಗ್ಯ ಸೇವೆ ನೀಡಿದ್ದಾರೆ. ಅವರ ಸಮಾಜ ಸೇವೆ ಕೂಡ ಅಸಾಧಾರಣವಾದದ್ದು. ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಅವರ ಮಾರ್ಗದರ್ಶನವನ್ನು, ನೇತೃತ್ವವನ್ನು ನಾವು ಮರೆಯುವುದು ಸಾಧ್ಯವೇ ಇಲ್ಲ! ಒಬ್ಬ ದೂರದೃಷ್ಟಿಯ ನಾಯಕನ, ಮುತದ್ಧಿ ಧುರೀಣರನ್ನು, ರಾಜ್ಯ ಒಬ್ಬ ಅಪರೂಪದ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ, ನನಗೆ ಅವರ ಮಾರ್ಗದರ್ಶನಗಳನ್ನು, ಪ್ರೀತಿ, ಆತ್ಮೀಯತೆ, ಆಶೀರ್ವಾದಗಳನ್ನು ಶಬ್ದಗಳಲ್ಲಿ ವಿವರಿಸುವುದು ಸಾಧ್ಯವಿಲ್ಲ.ದಿವಂಗತ ನಾಯಕರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತಾ, ಅವರ ಕುಟುಂಬ ಸದಸ್ಯರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...