Thursday, June 18, 2026
Thursday, June 18, 2026

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Date:

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಡಿ.12 ರಂದು ಇನ್‌ಸ್ಪೈರ್ ಎಂಬ ವಿನೂತನ ಕಾರ್ಯಕ್ರಮದಡಿ ಇಗ್ನೆಂಟ್ ಮೈಂಡ್ & ಇಗ್ನೆಂಟ್ ಪಾಸಿಟಿವಿಟಿ ಎಂಬ ಘೋಷವಾಕ್ಯದೊಂದಿಗೆ ಆನ್‌ಲೈನ್ ಪಾಡ್‌ಕಾಸ್ಟ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ 32 ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 183 ವಿದ್ಯಾರ್ಥಿ ನಿಲಯಗಳ 5 ನೇ ತರಗತಿಯಿಂದ ಪದವಿ/ಇಂಜಿನಿಯರಿಂಗ್/ಸ್ನಾತಕೋತ್ತರ ಓದುತ್ತಿರುವ ಸುಮಾರು 13 ರಿಂದ 15 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಕ್ಕಳ ಮಾನಸಿಕ ಒತ್ತಡ ನಿರ್ವಹಣೆ ತಜ್ಞರು ಹಾಗೂ ಆಪ್ತಸಮಾಲೋಚಕರಾದ ಆರ್ ನಾಗೇಶ್ ಇವರು ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿರ್ವಹಣೆ, ಆತ್ಮಜ್ಞಾನ, ಕೌಶಲ್ಯಗಳು, ಕನಸುಗಳು, ಕ್ರಿಯಾಶೀಲತೆ, ಸೃಜನಶೀಲತೆ, ಕಲಿಕೆ, ವಿದ್ಯಾರ್ಥಿಗಳ ನಡವಳಿಕೆ, ಒಳ್ಳೆಯ ಹವ್ಯಾಸಗಳು ಮತ್ತು ಕೆಟ್ಟ ಹವ್ಯಾಸಗಳಿಂದಾಗುವ ಪರಿಣಾಮಗಳು, ಹಠಮಾರಿತನದಿಂದಾಗುವ ದುಷ್ಪರಿಣಾಮಗಳು, ಜೀವನದಲ್ಲಿ ಒಳ್ಳೆಯ ಆದರ್ಶಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಧ್ಯೇಯ ಹಾಗೂ ಗುರಿ ಹಾಗೂ ನೀವಂದುಕೊಂಡಂತೆ ನೀವಾಗಿ ‘ಬಿದ ದ ಪರ್ಸನ್ ಆಫ್ ಯುವರ್ ಚಾಯ್ಸ್-ಗೋಲ್ ಸೆಟ್ಟಿಂಗ್ ಕುರಿತು ವಿವರಣೆ ನೀಡಿದರು.

Scheduled Castes Welfare Department ಈ ಆನ್‌ಲೈನ್ ಪಾಡ್‌ಕಾಸ್ಟ್ ವಿಡಿಯೋ ಸಂವಾದದಲ್ಲಿ ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರೀತಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...