MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ಪಾಲನೆ ಮತ್ತುನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ ಇಲ್ಲಿ ಡಿ. 18 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
