ಬೆಳಗಾವಿಯ ವಿಧಾನಪರಿಷತ್ ಅಧಿವೇಶನದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಅಝಾನ್ ವೇಳೆ ಡಿಸಿಬಲ್ ಮಿತಿ ಮೀರಿ ಲೌಡ್‌ಸ್ಪೀಕರ್ ಬಳಕೆಯಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯವನ್ನು ತೀವ್ರವಾಗಿ ಖಂಡಿಸಿದರು.
ಗಣೇಶೋತ್ಸವದ ವೇಳೆ ಡಿಜೆ ನಿಷೇಧಿಸುವ ಸರ್ಕಾರ, ದಿನನಿತ್ಯ ನಡೆಯುವ ಅಝಾನ್‌ಗೆ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ದ್ವಂದ್ವ ನೀತಿ ಎಂದು ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ಆದೇಶ ಹಾಗೂ Noise Pollution Rules ಎಲ್ಲ ಧರ್ಮಗಳಿಗೆ ಸಮಾನವಾಗಿ ಅನ್ವಯಿಸಬೇಕು, ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಡಿ.ಎಸ್. ಅರುಣ್ ಆಗ್ರಹಿಸಿದರು.
ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.
