Thursday, December 18, 2025
Thursday, December 18, 2025

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

Date:

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳಲ್ಲೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯವರು ಸ್ವಾರ್ಥ ಸಾಧನೆಯಲ್ಲಿ ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಎನ್‌ಡಿಎ ಸರ್ಕಾರದ ದ್ವೇಷ ರಾಜಕೀಯವನ್ನು ಖಂಡಿಸಿ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.

ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಲಾಗುತ್ತಿದೆ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ.

ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು ₹53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 200 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು ₹148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದ್ದಾರೆ.

CM Siddharamaih ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು, ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಆರೋಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...