Department of School Education ಸಂವಿಧಾನ ಪ್ರದತ್ತವಾದ ಮೂಲಭೂತ ಹಕ್ಕುಗಳಂತೆಯೇ ಪ್ರತಿಯೊಬ್ಬರು ಚುನಾವಣಾ ಸಂದರ್ಭದಲ್ಲಿ ಮತದಾನವನ್ನು ನೀಡುವ ಮೂಲಕ ಸದೃಢ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ಚುನಾವಣಾ ಆಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಹಾಗೂ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ(NVD) ಪ್ರಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಶಿವಮೊಗ್ಗ ತಾಲೂಕು ಮಟ್ಟದ ELC ಕನ್ನಡ ಪ್ರಬಂಧ ಸ್ಪರ್ಧೆ 2025-26 ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗುವುದು ವಿಷಾಧಕರ. ಮತದಾನ ಮಾಡುವುದು ಕೂಡ ಕರ್ತವ್ಯವಾಗಬೇಕು. ಚುನಾವಣೆಯ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಮತ ಚಲಾಯಿಸಿ ನಿಮ್ಮ ಭವಿಷ್ಯವನ್ನು ನೀವೇ ನಿರೂಪಿಸಿಕೊಳ್ಳಿ ಜಾಗೃತರಾಗಿರಿ ಎಂದು ಕಿವಿ ಮಾತು ಹೇಳಿದರು.
ಎಡಿಸಿ ಅಭಿಷೇಕ್ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಹೆಚ್. ವಿ. ಮಹೇಶ್ವರಪ್ಪ, ಉಪಾಧ್ಯಕ್ಷ ನಂಜಪ್ಪ. ಪ್ರಾಚಾರ್ಯ ಕೆ.ಎಚ್. ರಾಜು, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಫ್. ಕುಟ್ರಿ,ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆಯ ಮಂಜುನಾಥ್ ಬಣಕಾರ್ ಉಪಸ್ಥಿತರಿದ್ದರು.
Department of School Education ಇ ಎಲ್ ಸಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂಸಿಯ ಭರತ್ ಗೌಡ, ದ್ವಿತೀಯ ಸ್ಥಾನ ಸರ್ಕಾರಿ ಪದವಿಪೂರ್ವ ಕಾಲೇಜು ಆಯನೂರಿನ ಭಾಗ್ಯಲಕ್ಷ್ಮಿ, ತೃತೀಯ ಸ್ಥಾನ ಡಿವಿಎಸ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ಲಾವಣ್ಯ ಪಡೆದರು.
ನಿರ್ಣಾಯಕರಾಗಿ ಉಪನ್ಯಾಸಕರಾದ ಕೆ.ಎಚ್. ಪುಟ್ಟಪ್ಪ ಬಿಳವಾಣಿ, ಹರೀಶ್ ಓ.ಎಸ್., ಶಬ್ರಿನ್ ಬಾನು ಭಾಗವಹಿಸಿದ್ದರು.
Department of School Education ಪ್ರತಿಯೊಬ್ಬರು ಮತದಾನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢ ರಾಷ್ಟ್ರವನ್ನು ನಿರ್ಮಿಸೋಣ, ಚಂದ್ರಪ್ಪ ಎಸ್. ಗುಂಡಪಲ್ಲಿ
Date:
