ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಪಕ್ಕದ ಫುಟ್‌ಪಾತ್ ಮೇಲೆ ಡಿ. 15 ರಂದು ಸುಸ್ತಾಗಿ ಮಲಗಿದ್ದ ಸುಮಾರು 35-40 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.
ಮೃತ ಗಂಡಸಿನ ಹೆಸರು, ವಿಳಾಸ ಮತ್ತು ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಮೃತನ ಚಹರೆ 5.6 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು ಹೊಂದಿದ್ದು, ಬಲಗೈನ ಒಳಭಾಗದಲ್ಲಿ ಅಜಯ್ ಎಂಬ ಹಚ್ಚೆ ಗುರುತು ಇದೆ. ಮೈಮೇಲೆ ನೀಲಿ ಬಣ್ಣ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಜೀನ್ ಪ್ಯಾಂಟ್ ಧರಿಸಿರುತ್ತಾರೆ.
