women & child welfare Shivamogga ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಮಕ್ಕಳ ಆರೈಕೆ ಕ್ಷೇತ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ women & child welfare Shivamogga ನೀಡಲಾಗುವುದು. ಪ್ರತಿ ಪ್ರಕರಣಕ್ಕೆ ರೂ. 3000/- ಗಳ ಸಂಭಾವನೆ ನೀಡಲಾಗುವುದು.
ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೋಳ, ಶಿವಮೊಗ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಮಾಣ ಪತ್ರಗಳೊಂದಿಗೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
women & child welfare Shivamogga ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ.
Date:
