Dr. Anuradha Kurunji ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಆದರ್ಶಮಯವಾಗಿ ಯಶಸ್ವಿ ಜೀವನ ನಡೆಸಬೇಕೆಂದು ದಕ್ಷಿಣ ಕನ್ನಡದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.ಅನುರಾಧ ಕುರುಂಜಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಡಿ.19 ರಂದು ಇನ್‌ಸ್ಪೆöÊರ್ ಎಂಬ ವಿನೂತನ ಕಾರ್ಯಕ್ರಮದಡಿ ಇಗ್ನೆöÊಟ್ ಮೈಂಡ್ & ಇಗ್ನೆöÊಟ್ ಪಾಸಿಟಿವಿಟಿ ಎಂಬ ಘೋಷವಾಕ್ಯದೊಂದಿಗೆ ಏರ್ಪಡಿಸಲಾಗಿದ್ದ ಆನ್‌ಲೈನ್ ಪಾಡ್‌ಕಾಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ 32 ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 183 ವಿದ್ಯಾರ್ಥಿ ನಿಲಯಗಳ 5 ನೇ ತರಗತಿಯಿಂದ ಪದವಿ/ಇಂಜಿನಿಯರಿAಗ್/ಸ್ನಾತಕೋತ್ತರ ಓದುತ್ತಿರುವ ಸುಮಾರು 15 ರಿಂದ 20 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು.
ಮಾನವ ಜೀವನ ಅತ್ಯಂತ ಸೋಜಿಗದಿಂದ ಕೂಡಿದ್ದು, ತಾಯಿ ತನ್ನ ನೋವಿನಲ್ಲೂ ಸಂತಸ ಪಡುತ್ತಾ, ಮಕ್ಕಳ ಪಾಲನೆ-ಪೋಷಣೆ ಮಾಡಿ ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾಳೆ. ಇಂದು ಹೆಣ್ಣು ಪ್ರತಿ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿದ್ದರೂ ಶೋಷಣೆ ತಪ್ಪಿಲ್ಲ. ಹೆಣ್ಣಿನ ವಿರುದ್ದದ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ಹೋಗಲಾಡಿಸಲು ಉತ್ತಮ ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ಅತ್ಯಗತ್ಯವಾಗಿದ್ದು, ಸಮಾಜದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಶೋಷಣೆಗಳನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಾದ ನೀವು ದಿಟ್ಟ ಹೆಜ್ಜೆ ಇಡಬೇಕು. ಸಮಾಜದಲ್ಲಿ ಹೆಣ್ಣಿಗೆ ಉತ್ತಮ ಸ್ಥಾನಮಾನ ಮತ್ತು ಗೌರವ ದೊರೆಯುವಂತೆ ಮಾಡಬೇಕು ಎಂದರು.
Dr. Anuradha Kurunji ಈ ಆನ್‌ಲೈನ್ ಪಾಡ್‌ಕಾಸ್ಟ್ ವಿಡಿಯೋ ಸಂವಾದದಲ್ಲಿ ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರೀತಿ ಭಾಗವಹಿಸಿದ್ದರು.
Dr. Anuradha Kurunji ಆನ್ ಲೈನ್ ಪಾಡ್ ಕಾಸ್ಟ್ ಸಂದೇಶ.ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ- ಡಾ.ಅನುರಾಧ ಕುರುಂಜಿ
Date:
