B.Y. Raghavendra ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಜಿಲ್ಲಾ ಮಟ್ಟದ ಸಲಹಾ ಸಮಿತಿ’ ಹಾಗೂ ‘ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದರು.
ಜಿಲ್ಲೆಯ ಬ್ಯಾಂಕಿಂಗ್ ಮತ್ತು ಆರ್ಥಿಕ ಪ್ರಗತಿಯ ಪರಿಶೀಲನೆ ನಡೆಸಲಾಯಿತು.
ಆರ್ಥಿಕ ಒಳಗೊಳ್ಳುವಿಕೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೌಲಭ್ಯ ಮತ್ತು ಆರ್ಥಿಕ ಭದ್ರತೆ ಒದಗಿಸುವುದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಪಿ.ಎಂ. ಸ್ವನಿಧಿ, ಮುದ್ರಾ ಯೋಜನೆ, ಪಿ.ಎಂ. ವಿಶ್ವಕರ್ಮ ಹಾಗೂ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್‌ನಂತಹ ಮಹತ್ವಾಕಾಂಕ್ಷಿ ಯೋಜನೆಗಳು ಕೇವಲ ಅಂಕಿ ಅಂಶಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಪ್ರಧಾನಿಯವರ ವಿಶೇಷ ಕಾಳಜಿಯಾಗಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ, ಸಾಲ ಸೌಲಭ್ಯ ಕೋರಿ ಬರುವ ಜನಸಾಮಾನ್ಯರಿಗೆ, ರೈತರಿಗೆ ಹಾಗೂ ಉದ್ಯಮಿಗಳಿಗೆ ಅನಗತ್ಯ ಅಲೆದಾಟ ತಪ್ಪಿಸಬೇಕು. ಬ್ಯಾಂಕ್ ಅಧಿಕಾರಿಗಳು ವಿಳಂಬ ಧೋರಣೆಯನ್ನು ತೋರದೆ, ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಜನರ ಆರ್ಥಿಕ ಅಭಿವೃದ್ಧಿಗೆ ಸಹಕರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
B.Y. Raghavendra ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿವಿಧ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
