Hulikal Ghat ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್
ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ ಸಂಭವಿಸಿ ಮಗುವೊಂದು ಸಾವಿಗೀಡಾಗಿದೆ.
ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್
ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂ
ಆಗಿದೆ.
ಅಪಘಾತದಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಶರೀಫಾ ಬಿ (57), ಇಮಾಮ್ ಸಾಬ್ (73) ಹಾಗೂ ಸಫಾನ (28) ಗಾಯಗೊಂಡಿದ್ದಾರೆ.
Hulikal Ghat ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ರವಾನೆಮಾಡಲಾಗಿದೆ.
ಬೆಳಗಿನ ಜಾವ 3 ಗಂಟೆಗೆ ನಡೆದ ಘಟನೆ ಸಂಭವಿಸಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
