National Legal Services Authority ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ-ಬೆಂಗಳೂರು ಇವರುಗಳ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿರುವ ವೈವಾಹಿಕ ವ್ಯಾಜ್ಯಗಳು, ಅಪಘಾತಕ್ಕೆ ಸಂಬಂಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ವ್ಯಾಜ್ಯಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರಾಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಜುಲೈ 2025 ರಿಂದ ಸೆಪ್ಟಂಬರ್ 2025ರವರೆಗೆ 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ 236 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿರುತ್ತದೆ.
ದಿ:13/12/2025 ರಂದು ಕೈಗೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 14976 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. 24,59,94,492/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ. ಹಾಗೂ 1,33,977 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. 16,32,67,510/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ.
ಜನವರಿ 2026 ರಿಂದ ಮಾರ್ಚ್ 2026 ರವರೆಗೆ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0ರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ದಿ:14/03/2026 ರಂದು ಈ ವರ್ಷದ ಮೊದಲ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ.
National Legal Services Authority ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ತಮಗೆ ಸೂಕ್ತಯೆನಿಸುವ ನ್ಯಾಯಯುತವಾದ ಪರಿಹಾರಗಳನ್ನು ಪಡೆದುಕೊಳ್ಳಲು ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ಅಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ನೇಮಿಸಲು ನೇರವಾಗಿ ಅಥವಾ ವಕೀಲರ ಮೂಲಕ ಮನವಿ ಮಾಡಕೊಂಡು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯಲ್ಲಿ ಮಧ್ಯಸ್ಥಿಕೆದಾರರಾಗಿ ಸೇವೆ ಸಲ್ಲಿಸುತ್ತಿರುವ ನುರಿತ ಹಿರಿಯ ನ್ಯಾಯವಾದಿಗಳ ಸಹಾಯದಿಂದ ಪ್ರಕರಣಗಳಲ್ಲಿ ನ್ಯಾಯವನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಮತ್ತು ವಕೀಲರು ಈ ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
National Legal Services Authority ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳ ಇತ್ಯರ್ಥಕ್ಕೆ14-3-26 ರಂದು ಲೋಕ ಅದಾಲತ್.
Date:
