Thursday, March 19, 2026
Thursday, March 19, 2026

CM Siddaramaiah ಪರಿಸರವನ್ನು ನಾವು ರಕ್ಷಿಸಿದರೆ ಅದಹ ನಮ್ಮನ್ನು ರಕ್ಷಿಸುತ್ತದೆ.ಚಿತ್ರಸಂತೆಯ ಧ್ಯೇಯವಾಕ್ಯ ಅರ್ಥಪೂರ್ಣ- ಸಿದ್ಧರಾಮಯ್ಯ.

Date:

CM Siddaramaiah ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆದ 23ನೇ ಚಿತ್ರಸಂತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ ಎಂದರು.

ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ. ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

CM Siddaramaiah ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ. 30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು. ಸಾಲು ಮರದ ತಿಮ್ಮಕ್ಕನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಹಲವು ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು ಎಂದು ತಿಳಿಸಿದರು.

ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...