Friday, March 20, 2026
Friday, March 20, 2026

ಜೀವನಕ್ಕಾಗಿ ಪತ್ರಿಕೋದ್ಯಮ ಮಾಡಬೇಡಿ. ಅದು ಒಂದು ಅಭಿಯಾನ ಇದ್ದಂತೆ- ಕೆ.ಶಿವಕುಮಾರ್.

Date:

ದಲಿತ ಪತ್ರಕರ್ತರ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡುವ ಸಮಿತಿಯು ಈ ಬಗ್ಗೆ ಸಮಗ್ರ ಅಧ್ಯಯನ ಮಾಡಲು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯಲ್ಲಿ ಇರುವ ಅಂಶಗಳನ್ನು ಜಾರಿಗೊಳಿಸಲು ಪ್ರಯತ್ನಿಸುವುದಾಗಿ’ ಸಮಿತಿಯ ಅಧ್ಯಕ್ಷರೂ ಆದ ವಿಧಾನ ಪರಿಷತ್‌ ಸದಸ್ಯ ಕೆ. ಶಿವಕುಮಾರ್‌ ತಿಳಿಸಿದರು.
ʼಹೊಸ ಜಾಹೀರಾತು ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯದವರು ಪ್ರಕಟಿಸುವ ಪತ್ರಿಕೆಗಳಿಗೆ ಆದ್ಯತೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಅವರು ತಿಳಿಸಿದರು.
ಜೀವನಕ್ಕಾಗಿ ಪತ್ರಿಕೋದ್ಯಮ ಮಾಡಬಾರದು. ಪತ್ರಿಕೋದ್ಯಮ ಒಂದು ಮಿಷನ್‌ (ಅಭಿಯಾನ) ಇದ್ದಂತೆ. ಇಂದು ನಮ್ಮ ದೇಶದಲ್ಲಿ ಒಗ್ಗಟ್ಟು ಕಾಪಾಡಿಕೊಂಡಿರಲು ಪತ್ರಿಕೋದ್ಯಮವೇ ಕಾರಣ ಎಂದು ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಶನಿವಾರ ಆಯೋಜಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ ಪತ್ರಿಕೆಗಳಲ್ಲಿ ಎಐ ಬಳಕೆ ಮತ್ತು ಡಿಜಿಟಲ್‌ ಸವಾಲುಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದು ತತ್ವ ಸಿದ್ಧಾಂತವನ್ನು ಪ್ರತಿಪಾದಿಸುವ ಮೂಲಕ ಸುಳ್ಳನ್ನು ಸತ್ಯವೆಂದು ಬಿಂಬಿಸುವ ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಕೆಲ ಪಕ್ಷಗಳು ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಕೆಲಸ ಮಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ದಲಿತ ಸಂಪಾದಕರ ಹಾಗೂ ಪತ್ರಕರ್ತರ ಜವಾಬ್ದಾರಿ ಹೆಚ್ಚಿದೆ ಎಂದ ಅವರು, ಎಲ್ಲ ಪತ್ರಿಕೆಗಳಲ್ಲಿ ಕಡ್ಡಾಯವಾಗಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಸಂಪಾದಕೀಯ ಬರೆಯಬೇಕು. ಈಗ ಕುಟುಂಬ ಆಧಾರಿತ ಪತ್ರಿಕೆಗಳು ಹೆಚ್ಚಾಗಿವೆ. ಇದನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.
‘ಮುಖ್ಯ ವಾಹಿನಿಯ ಬಹಳಷ್ಟು ಪತ್ರಿಕೆಗಳು ಒಂದು ತತ್ವ, ಸಿದ್ಧಾಂತದ ಕಡೆಗೆ ವಾಲುತ್ತಿವೆ. ನಾವು ಸ್ವತಂತ್ರ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಬೇಕು’ ಎಂದು ಅವರು ಸಲಹೆ ನೀಡಿದರು.
“ಪತ್ರಿಕೆಗಳಲ್ಲಿ ಸಂವಿಧಾನದ ಕುರಿತು ಲೇಖನಗಳನ್ನು ಪ್ರಕಟಿಸಿ, ಅವುಗಳನ್ನು ಶಾಲಾ ಕಾಲೇಜಿನ ಮಕ್ಕಳಿಗೆ ತಲುಪಿಸುವ ಕೆಲಸ ಮಾಡಬೇಕು. ಜ. 26ರಿಂದ 2027ರ ಜ. 26ರವರೆಗೆ ಎರಡು ವರ್ಷಗಳ ಕಾಲ ಸಂವಿಧಾನ ಪೀಠಿಕೆಯಿಂದ ಹಿಡಿದು ಪ್ರಮುಖ ಅಂಶಗಳನ್ನು ಪ್ರಕಟಿಸಿ, ಮಾಧ್ಯಮ ಅಕಾಡೆಮಿಗೆ ತಂದು ಕೊಡಬೇಕು’ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಶಿವಾಜಿ ಗಣೇಶನ್‌ ಅವರು ಸಂಪಾದಕರಿಗೆ ಸತ್ಯಶೋಧನೆ, ಪ್ರಾಮಾಣಿಕತೆಯ ಮಹತ್ವವನ್ನು ತಮ್ಮ ಅನುಭವಗಳೊಂದಿಗೆ ವಿವರಿಸಿದರು.
ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ತರಬೇತಿ ಎಐ ಬಳಕೆ ಹಾಗೂ ಅದರ ಸಾಧಕ, ಬಾಧಕ, ಹೊಸ ತಂತ್ರಜ್ಞಾನಗಳ ಅಳವಡಿಕೆ ಕುರಿತು ನಿಮ್ಮನ್ನು ಚಿಂತನೆಗೆ ಹಚ್ಚುವ ಒಂದು ಪ್ರಯತ್ನವಾಗಿದೆ ಎಂದು ವಿವರಿಸಿದರು.
ಅಕಾಡೆಮಿಯ ಸದಸ್ಯರಾದ ಶ್ರೀ ಜೆ.ಅಬ್ಬಾಸ್‌ ಮುಲ್ಲಾ ಹಾಗೂ ಶ್ರೀ ಕೆ. ವೆಂಕಟೇಶ್‌, ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಶ್ರೀ ಚೆಲುವರಾಜು ಮತ್ತು ಕಾರ್ಯದರ್ಶಿ ಸಹನಾ ಎಂ. ಉಪಸ್ಥಿತರಿದ್ದರು. ರಾಹುಲ್‌ ಗುಂಡಾಲ, ಶ್ರೀ ಡಿ.ಎನ್.‌ ಹಾಗೂ ಎಸ್.‌ ಕುಮಾರ್‌ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...