Monday, May 4, 2026
Monday, May 4, 2026

CM Siddharamaih ಮಹನೀಯರು ಎಳೆದ ಸಾಮಾಜಿಕ ನ್ಯಾಯದ ಬಂಡಿಯನ್ನ ಇನ್ನಷ್ಟು ಮುಂದಕ್ಕೆ ಎಳೆಯುವ ಅವಕಾಶ ಸಿಕ್ಕಿದೆ : ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddharamaih ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಕರ್ನಾಟಕದ
ಮುಖ್ಯಮಂತ್ರಿಗಳಾಗಿ
ದೀರ್ಘಾವಧಿ ಆಡಳಿತದ ಚುಕ್ಕಾಣಿ ಹಿಡಿದ ಪ್ರಥಮ ರಾಜಕಾರಣಿ ಎಂಬ ಖ್ಯಾತಿ ಪಡೆದ ಸಂದರ್ಭದಲ್ಲಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡರು.

ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ.

ಸಾಮಾಜಿಕ ನ್ಯಾಯದ ಬಂಡಿಯ ಪಯಣಕ್ಕೆ ಕರ್ನಾಟಕದಲ್ಲಿ ದೀರ್ಘ ಪರಂಪರೆ ಇದೆ. ಬಸವಣ್ಣನವರಿಂದ ಪ್ರಾರಂಭಗೊಂಡು ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಡಿ.ದೇವರಾಜ ಅರಸು ವರೆಗೆ ಹಲವಾರು ಮಹನೀಯರು ಈ ಬಂಡಿಯನ್ನು ಎಳೆದುಕೊಂಡು ಬಂದಿದ್ದಾರೆ. ಇದನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಅವಕಾಶ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬದಲಾಗಿರುವ ಸಾಮಾಜಿಕ ಮತ್ತು ರಾಜಕೀಯದ ಸ್ಥಿತ್ಯಂತರಗಳ ಇತಿ-ಮಿತಿಯಲ್ಲಿ ಜವಾಬ್ದಾರಿಯಾಗಿ ನಾನು ಸ್ವೀಕರಿಸಿ, ಮುನ್ನಡೆಯುತ್ತಿದ್ದೇನೆ.

CM Siddharamaih ಅಧಿಕಾರ, ಸಂಪತ್ತು ಮತ್ತು ಅವಕಾಶಗಳ ಹೆಬ್ಬಾಗಿಲನ್ನು ಸರ್ವರಿಗೂ ತೆರೆದು ಸಮಾನವಾಗಿ ಹಂಚಿಕೆ ಮಾಡದ ಹೊರತು ಸುಸ್ಥಿರವಾದ ಅಭಿವೃದ್ದಿಯನ್ನು ಕಾಣಲು ಸಾಧ್ಯ ಇಲ್ಲ ಎನ್ನುವುದು ಅರಸರ ಅಚಲ ನಂಬಿಕೆಯಾಗಿತ್ತು. ಇದಕ್ಕಾಗಿಯೇ ಅವಕಾಶ ವಂಚಿತ ಸಮುದಾಯಗಳಿಗೆ ಸೇರಿರುವ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದರು. ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ‌ ಹಂಚಿಕೆಯ ಪ್ರಕ್ರಿಯೆ ಪ್ರಾರಂಭಿಸಿದರು. ಮೀಸಲಾತಿಯ ಮೂಲಕ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೂಡಾ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು. ಜನಪ್ರತಿನಿಧಿಗಳೆಲ್ಲರಿಗೂ ಈ ಸಾಧನೆ ಪ್ರೇರಣೆಯಾಗಬೇಕು.

ಇಂದಿನ ದಿನದ ವಿಶೇಷ ಸಂದರ್ಭದಲ್ಲಿ ನಮಗೆಲ್ಲ ಪ್ರೇರಣಾದಾಯಿಗಳು ಮತ್ತು ಪೂಜನೀಯರೂ ಆಗಿರುವ ಡಿ.ದೇವರಾಜ ಅರಸು ಅವರಿಗೆ ನಾನು ಗೌರವದ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ
ಸಂತಸ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...