Thursday, March 19, 2026
Thursday, March 19, 2026

Shimoga Telex ಶಿವಮೊಗ್ಗ ” ಟೆಲೆಕ್ಸ್” ಪತ್ರಿಕೆಯ ಆರ್.ಪಿ.ಭರತ್ ರಾಜ್ ಸಿಂಗ್ ಅವರಿಗೆ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ.

Date:

Shimoga Telex ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ. ಭರತ್ ರಾಜ್ ಸಿಂಗ್ 2025ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನಿವೃತ್ತ ಪ್ರಾಂಶುಪಾಲರಾದ ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್ ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ 1989ರಲ್ಲಿ ಶಿವಮೊಗ್ಗ ಎಕ್ಸ್ ಪ್ರೆಸ್ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ 1991 ರಿಂದ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್, ಸಿ.ಎಸ್.ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಸಹ್ಯಾದ್ರಿ ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತ್ತಿದ್ದರು.

Shimoga Telex 1997 ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್.ಪಿ.ಭರತ್‌ರಾಜ್ ಸಿಂಗ್ ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ.

ಆರ್.ಪಿ.ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ 2025 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ.
ಪ್ರಶಸ್ತಿಯು 50 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...