Thursday, March 19, 2026
Thursday, March 19, 2026

Shimoga News ಜಿಲ್ಲೆಯ ಕೈಗಾರಿಕಾ ಕ್ಷೇತ್ರಕ್ಕೆ ಎಸ್.ರುದ್ರೇಗೌಡರ ಕೊಡುಗೆ ಅಪಾರ- ಡಿ.ಜಿ.ಬೆನಕಪ್ಪ.

Date:

Shimoga News ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡರ ಕೊಡುಗೆ ಅಪಾರ ಎಂದು ಶಿವಮೊಗ್ಗ-ಭದ್ರಾವತಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಹೇಳಿದರು.

ಶಾಂತಲಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್.ರುದ್ರೇಗೌಡ ಹಾಗೂ ಮಲ್ನಾಡ್ ಅಲಾಯ್ಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ವೈ.ವಿ.ಮಧುಕರ ಜೋಯ್ಸ್ ಅವರ ಜನ್ಮದಿನದ ಪ್ರಯುಕ್ತ ಶಿವಮೊಗ್ಗ-ಭದ್ರಾವತಿ ಕೈಗಾರಿಕೆಗಳ ಸಂಘ ಮಾಚೇನಹಳ್ಳಿಯಲ್ಲಿ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿ, ಶಿವಮೊಗ್ಗ ಮಿಡ್ ಟೌನ್ ರೋಟರಿ ರಕ್ತನಿಧಿ ಹಾಗೂ ಸುಬ್ಬಯ್ಯ ಆಸ್ಪತ್ರೆ ರಕ್ತನಿಧಿ ಸಹಕಾರದೊಂದಿಗೆ ಆಯೋಜಿಸಿದ್ದ “ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ”ದಲ್ಲಿ ಮಾತನಾಡಿದರು.

ಎಸ್.ರುದ್ರೇಗೌಡ ಹಾಗೂ ಮಧುಕರ್ ಜೋಯಿಸ್ ಅವರು ದಾನಿಗಳು ಹಾಗೂ ಕೈಗಾರಿಕಾ ಉದ್ಯಮಿಗಳಾಗಿದ್ದಾರೆ. ಸಾಕಷ್ಟು ಜನರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

Shimoga News ನಮ್ಮ ವೃತ್ತಿಯ ಜೊತೆಗೆ ಸಮಾಜ ಸೇವೆಯು ಅತಿ ಮುಖ್ಯ. ವಿಶೇಷ ದಿನಗಳಂದು ರಕ್ತದಾನ ಶಿಬಿರ ಆಯೋಜಿಸುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ. ತುರ್ತು ಸಂದರ್ಭದಲ್ಲಿ ಇರುವವರಿಗೆ ರಕ್ತ ದೊರೆಯಲು ಸಹಕಾರಿಯಾಗುತ್ತದೆ. ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ಸದಾ ಆರೋಗ್ಯದಿಂದ ಇರುತ್ತೇವೆ. ಇನ್ನೊಬ್ಬರ ಪ್ರಾಣ ಉಳಿಸಿದ ತೃಪ್ತಿ ಸಿಗುತ್ತದೆ ಎಂದು ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಎಲ್ಲಾ ಕೈಗಾರಿಕೆಗಳ ಮಾಲೀಕರು, ಅಧಿಕಾರಿ ಹಾಗೂ ಕಾರ್ಮಿಕ ವರ್ಗ ಪಾಲ್ಗೊಂಡರು. ಒಟ್ಟು ರಕ್ತದ 165 ಯೂನಿಟ್ ಸಂಗ್ರಹವಾಯಿತು. ಚಂದ್ರಶೇಖರ್, ರಾಜೇಶ್, ದಿನೇಶ್, ಸೌರಭ್, ಮಹೇಂದ್ರಪ್ಪ, ಹರ್ಷ, ವಿನಯ್, ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...