ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ, ಸುಮಾರು ಐದು ವರ್ಷದ ಪ್ರಾಯದ ಚಿರತೆ ಎಂದು ಹೇಳಲಾಗಿದೆ.
ಮೇಲ್ನೋಟಕ್ಕೆ ಇದು ಸ್ವಾಭಾವಿಕ ಸಾವಾಗಿರಬಹುದೆಂದು ಎಂದು ತಿಳಿಸಿದ ಅರಣ್ಯ ಇಲಾಖೆ ತಿಳಿಸಿದ್ದು, ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಆರ್‌ಎಫ್‌ಒ ದಾಖಲಸಿಕೊಂಡಿದ್ದಾರೆ.
ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಮೃತದೇಹ ಪತ್ತೆಯಾದ ಸ್ಥಳದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗಿದೆ
ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
