ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳಿನ ದೇವಿಕೊಪ್ಪದಲ್ಲಿ
ಸಾಲಭಾದೆಗೆ -ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ
ಘಟನೆ ನಡೆದಿದೆ.
ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಸಾಲ ಭಾದೆಯಿಂದ ಬೇಸತ್ತು ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೋಲಿಸರಿಗೆ ವಿಷಯ ತಿಳಿಸಿದ್ದಾರೆ . ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
