D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ ರಾಮ್‌ಜಿ ಕಾಯ್ದೆಯನ್ನು ನಾವು ವಿರೋಧಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮನರೇಗಾ ಹೆಸರು ಬದಲಾವಣೆಯನ್ನು ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ 5 ಕಿ.ಮೀ ಪಾದಯಾತ್ರೆ ಹಾಗೂ ಜನವರಿ 22ರಿಂದ ಜನವರಿ 31ರವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
