ಬೆಂಗಳೂರು ಪ್ರತಿನಿಧಿಯಿಂದ
Siddaganga Mutt ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ಉಪರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Siddaganga Mutt ನಂತರ ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಹೆಚ್‌ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣಿಸಿದರು.
