Monday, February 16, 2026
Monday, February 16, 2026

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಿವಮೊಗ್ಗ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

Date:

ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಿವಮೊಗ್ಗ ಇವರ ವತಿಯಿಂದ ಜ.26 ರ ಬೆಳಗ್ಗೆ 09 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನೆರವೇರಿಸುವರು.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿ.ಪಂ ಸಿಇಓ, ಮಹಾನಗರ ಪಾಲಿಕೆ ಆಯುಕ್ತರು, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮಾಧ್ಯಮದವರು, ಸರ್ಕಾರಿ ಅಧಿಕಾರಿಗಳು/ನೌಕರರು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವರು.
ಸಂಜೆ 5 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಮತ್ತು ನಗರದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...