Thursday, March 19, 2026
Thursday, March 19, 2026

Madhu Bangarappa ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲು ಸೂಚನೆ : ಮಧು ಬಂಗಾರಪ್ಪ

Date:

Madhu Bangarappa ಆರೋಗ್ಯ, ಶಿಕ್ಷಣ, ಕೃಷಿ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನರ ಅನುಕೂಲಕ್ಕಾಗಿ ಅಗತ್ಯವಾಗಿ ಆಗಬೇಕಿರುವ ಅಭಿವೃದ್ದಿ ಕಾಮಗಾರಿಗಳು, ಯೋಜನೆಗಳ ಕುರಿತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ವರದಿ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2026-27 ನೇ ಸಾಲಿಗೆ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳಿಂದ ಒಟ್ಟು ರೂ.1490587.25 ಲಕ್ಷ ಅನುದಾನದ ಬೇಡಿಕೆ ಇಡಲಾಗಿದೆ. ನೀತಿ ಆಯೋಗದಿಂದ ಇದೀಗ ಪ್ರತಿ ವರ್ಷ ಯೋಜನಾ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅದರಂತೆ ಮೊದಲು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಚರ್ಚಿಸಿ, ಅಭಿವೃದ್ದಿ ಯೋಜನಾ ವರದಿಗೆ ಅನುಮೋದನೆ ಪಡೆದ ನಂತರ ರಾಜ್ಯಕ್ಕೆ ಸಲ್ಲಿಸಲಾಗುವುದು. ಆದ್ದರಿಂದ ಅಧಿಕಾರಿಗಳು ಸ್ಥಳೀಯ ವಸ್ತುಸ್ಥಿತಿ ಬಲ್ಲ ಶಾಸಕರು, ಜನಪ್ರತಿನಿಧಿಗಳ ಸಲಹೆ ಪಡೆದು ಪ್ರಸ್ತಾವನೆ ಸಲ್ಲಿಸಬೇಕು, ಸಚಿವನಾದ ನಾನೂ ಸೇರಿದಂತೆ ಸಂಬಂಧಿಸಿದ ಎಲ್ಲರೂ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚಿಸಬೇಕು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಹೊಳಲೂರು ಸಮುದಾಯ ಆರೋಗ್ಯ ಕೇಂದ್ರ (ಸಿಹೆಚ್‌ಸಿ)30 ಬೆಡ್ ಸಾಮರ್ಥ್ಯ ಹೊಂದಿದ್ದು 50 ಬೆಡ್‌ಗಳ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು. ಅಲ್ಲಿ ಕಳೆದ ಸಾಲಿನಲ್ಲಿ 4300 ದಾಖಲಾತಿ ಆಗಿದ್ದು ಪ್ರತಿ ದಿನ 15 ದಾಖಲಾತಿ ಇರುತ್ತದೆ. ಆದ್ದರಿಂದ ಉತ್ತಮ ಸ್ತ್ರೀರೋಗ ತಜ್ಞರನ್ನು ನೇಮಿಸಿ ಮೇಲ್ದರ್ಜೆಗೇರಿಸಬೇಕು. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿ ಕಡೆಯವರಿಗೆ ಊಟ ಮಾಡಲು ಒಂದು ಹಾಲ್ ನಿರ್ಮಿಸಲು ಯೋಜನಾ ವರದಿಯಲ್ಲಿ ಸೇರ್ಪಡೆಗೊಳಿಸಬೇಕು. ಹಾಗೂ ಬೀದಿ ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆಗೆ ಕ್ರಮ ವಹಿಸಬೇಕೆಂದರು.
ಶಾಸಕರಾದ ಶಾರದಾ ಪರ‍್ಯಾನಾಯ್ಕ್ ಮಾತನಾಡಿ ನನ್ನ ವ್ಯಾಪ್ತಿಗೆ ತಾಲ್ಲೂಕು ಆಸ್ಪತ್ರೆ ಬರುವುದಿಲ್ಲ. ಹೊಳಲೂರು ಆಸ್ಪತ್ರೆ ಮೇಲ್ದರ್ಜೆಗೇರಿಸಿದರೆ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗುತ್ತದೆ ಎಂದರು.
ಸಚಿವರು ಪ್ರತಿಕ್ರಿಯಿಸಿ, ಆರೋಗ್ಯ ಇಲಾಖೆಯ ಅಭಿವೃದ್ದಿ ಕಾಮಗಾರಿಗಳಿಗೆ ರೂ.2600.50 ಲಕ್ಷ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಳಲೂರು ಸಿಹೆಚ್‌ಸಿ ಮೇಲ್ದರ್ಜೆಗೇರಿಸುವ ಕುರಿತು ಡಿಹೆಚ್‌ಓ ರವರು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ ಅವರು ಬೀದಿನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆಗೆ ಸಂಬಂಧಿಸಿದಂತೆ ಪಾಲಿಕೆ ವತಿಯಿಂದ ಪ್ರಸ್ತಾವನೆ ಸಲ್ಲಿಸಿ ಸೂಕ್ತ ಕ್ರಮ ವಹಿಸಬೇಕು ಎಂದರು.
ಶಿಕ್ಷಣ ಇಲಾಖೆಯಲ್ಲಿ ಶಾಲೆಗಳ ಕೊಠಡಿಗಳ ದುರಸ್ತಿ, ಕುಡಿಯುವ ನೀರು, ಶೌಚಾಲಯ, ಅಡುಗೆ ಮನೆ ಹಾಗೂ ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೆ ಸಭಾಂಗಣವನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿರಿ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ಬಿಸಿಎಂ ಹಾಸ್ಟೆಲ್ ಸೇರಿದಂತೆ ಕಲ್ಯಾಣ ಇಲಾಖೆಗಳ ಎಲ್ಲ ಹಾಸ್ಟೆಲ್‌ಗಳಲ್ಲಿ ಸ್ಥಳಾವಕಾಶ ಇದ್ದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿರಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಕುಡಿಯುವ ನೀರು ಮತ್ತು ಜೆಜೆಎಂ ಎರಡೂ ಯೋಜನೆಗಳಡಿ ಕುಡಿಯುವ ನೀರಿನ ಮೂಲದ ಬಗ್ಗೆ ಹಾಗೂ ಬಾಕಿ ಇರುವ ಯುಜಿಡಿ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಪಿಡಬ್ಲುö್ಯಡಿ ಮತ್ತು ಪಿಆರ್‌ಇಡಿ ವಿಭಾಗದಿಂದ ಜಿಲ್ಲೆಯಲ್ಲಿ ಅವಶ್ಯವಿರುವ ರಸ್ತೆಗಳ ಕುರಿತು ಸಮರ್ಪಕವಾಗಿ ಪ್ರಸ್ತಾವನೆ ಸಲ್ಲಿಸಬೇಕು. ರಸ್ತೆಗಳು ಎಲ್ಲಿ ಮತ್ತು ಎಷ್ಟು ಬೇಕು ಎಂದು ಪ್ರಸ್ತಾವನೆ ಕಳುಹಿಸಿ, ಮುಖ್ಯಮಂತ್ರಿಗಳ ಬಳಿ ಈ ಕುರಿತು ಚರ್ಚಿಸಲಾಗುವುದು. ರಸ್ತೆ ವಿಷಯದಲ್ಲಿ ಸಾರ್ವಜನಿಕರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದು, ಆದ್ಯತೆಯ ಮೇಲೆ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗುವುದು ಎಂದರು.
Madhu Bangarappa ಮಾಧ್ಯಮದ ವರದಿಗಳನ್ನು ಗಂಭೀರವಾಗಿ ಪರಿಗಣಿಸಿ : ಸಾರ್ವಜನಿಕ ಸಂಬAಧಿತ ವಿಷಯಗಳು, ಕುಂದು ಕೊರತೆಗಳ ಬಗ್ಗೆ ದಿನ ಪತ್ರಿಕೆಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ವರದಿಯಾಗುವ ವರದಿಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಗಮನ ಹರಿಸಿ ಗಂಭೀರವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವ, ವ್ಯವಸ್ಥೆಯನ್ನು ಸುಧಾರಿಸಲು ಕ್ರಮ ವಹಿಸಬೇಕು. ಶಿವಮೊಗ್ಗದಲ್ಲಿ ತ್ಯಾಜ್ಯ ಸಮಸ್ಯೆ ಕುರಿತು ರಾಜ್ಯ ಮಟ್ಟದ ದಿನಪತ್ರಿಕೆ ವರದಿ ಮಾಡಿರುವ ಕುರಿತು ಸಭೆಯ ಗಮನ ಸೆಳೆದ ಸಚಿವರು, ಎಲ್ಲ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಹಶೀಲ್ದಾರ್‌ಗಳು, ಪಾಲಿಕೆ ಆಯುಕ್ತರು ನಿಯಮಿತವಾಗಿ ಈ ಬಗ್ಗೆ ಗಮನ ಹರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಸ್ಥಳೀಯ ಸಮಿತಿ ಸದಸ್ಯರು, ಗ್ರಾ.ಪಂ ಸದಸ್ಯರು, , ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ತಾ.ಪಂ. ಆಡಳಿತಾಧಿಕಾರಿಗಳು, ಜಿ.ಪಂ ಮುಖ್ಯ ಯೋಜನಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...