Thursday, March 19, 2026
Thursday, March 19, 2026

Chamber of commerce Shivamogga ದೇಶದ ಅಭಿವೃದ್ಧಿಯಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಅಪಾರ : ಎನ್.ಗೋಪಿನಾಥ್

Date:

Chamber of commerce Shivamogga ದೇಶ ಪ್ರಗತಿ ಸಾಧಿಸುವಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಅಪಾರ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಸಿ ಎಸ್ ಬಿ ಬ್ಯಾಂಕ್ ಶಿವಮೊಗ್ಗ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರದಲ್ಲಿ ಮಾತನಾಡಿ, ಹಣಕಾಸು ಸಂಸ್ಥೆಗಳು ಜನರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಪ್ರೋತ್ಸಾಹಿಸಬೇಕು. ಜನರ ಜೀವನಕ್ಕೆ ಅನುಕೂಲವಾಗುವ ಯೋಜನೆಯನ್ನು ಒದಗಿಸಬೇಕು ಎಂದು ತಿಳಿಸಿದರು.

ಉದ್ಯಮಿ ಈಶ್ವರ್ ಸರ್ಜಿ ಮಾತನಾಡಿ, ಜಿಲ್ಲೆಗೆ ಹೊಸ ಬ್ಯಾಂಕ್ ಸಂಸ್ಥೆಗಳು ಬರುತ್ತಿರುವುದು ಸ್ವಾಗತಾರ್ಹ. ನಗರದಲ್ಲಿ ಹೆಚ್ಚಿನ ಅವಕಾಶಗಳು ಇರುವುದನ್ನು ಖಚಿತಪಡಿಸುತ್ತವೆ ಎಂದರು.

ಕೇರಳ ಸಮಾಜಂ ಅಧ್ಯಕ್ಷ ಕೆ.ರವೀಂದ್ರ ಮಾತನಾಡಿ, ಜನರಿಗೆ ಉತ್ತಮ ರೀತಿಯಲ್ಲಿ ಹಣಕಾಸು ಸೇವೆಗಳನ್ನು ಒದಗಿಸುವುದರಿಂದ ಬ್ಯಾಂಕ್ ಪ್ರಗತಿ ಸಾಧಿಸುವ ಜತೆಯಲ್ಲಿ ಜನರಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.

ಗೋಕುಲಂ ಚಿಟ್ಸ್ ಮತ್ತು ಫೈನಾನ್ಸ್ ಎಜಿಎಂ ಎನ್.ರಾಗೇಶ್ ಮಾತನಾಡಿ, ಐವತ್ತು ವರ್ಷದಿಂದ ಸಿ ಎಸ್ ಬಿ ಬ್ಯಾಂಕ್ ನೊಂದಿಗೆ ವ್ಯವಹಾರ ಚಟುವಟಿಕೆ ನಡೆಸುತ್ತಿದ್ದು, ಒಳ್ಳೆಯ ಸೇವೆ ನೀಡುತ್ತಿದೆ ಎಂದು ತಿಳಿಸಿದರು.

Chamber of commerce Shivamogga ಸಿ ಎಸ್ ಬಿ ಬ್ಯಾಂಕ್ ಜೋನಲ್ ಹೆಡ್ ಜೈನಿತ್ ಶರ್ಮ ಮಾತನಾಡಿ, 105 ವರ್ಷದಿಂದ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ 60ನೇ ಶಾಖೆ ಆರಂಭಗೊಂಡಿದೆ ಎಂದರು.

ಬಿ.ಎಸ್.ಜಗನ್ನಾಥ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕ್ಲಸ್ಟರ್ ಹೆಡ್ ಕೆ.ಪುರುಷೋತ್ತಮ್, ಯಶವಂತ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...