ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ನಾಮ ನಿರ್ದೇಶಕರು,ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು, ತ್ಯಾಗರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಳೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನಾಗರಾಜ ಎ.ಎಂ.ರವರು ವಿಶೇಷ ಉಪನ್ಯಾಸ ನೀಡುವರು.
ಫೆಬ್ರವರಿ 01 ರಂದು ಶಿವಮೊಗ್ಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ
Date:
