Sunday, February 1, 2026
Sunday, February 1, 2026

Karnataka State Commission for Protection of Child Rights ವಿಶೇಷಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ದಾಖಲಾತಿ ನೀಡಬೇಕು : ಅಪರ್ಣಾ ಕೊಳ್ಳ

Date:

Karnataka State Commission for Protection of Child Rights ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ಓದಲು ಅವಕಾಶ ನೀಡಬೇಕು. ಹಾಗೂ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಪೋಕ್ಸೋ, ಬಾಲ್ಯ ವಿವಾಹ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ನೀಡುವುದು ಅತ್ಯವಶ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಕೊಳ್ಳ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಜಿಲ್ಲಾ ಡಯಟ್ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್‌ಡಬ್ಲುö್ಯ) ಮತ್ತು ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‌ಡಬ್ಲುö್ಯ) ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್ ಡಬ್ಲುö್ಯ) ಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಕ್ಕಳ ರಕ್ಷಣೆ ಕುರಿತು ಏರ್ಪಡಿಸಿದ್ದ ಅರಿವು/ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಮಕ್ಕಳ ರಕ್ಷಣೆ ಕುರಿತು ಆಯೋಜಿಸಿರುವ ವಿಶೇಷ ತರಬೇತಿ ಇದು. ರಾಜ್ಯದಲ್ಲಿ 10 ಲಕ್ಷ ಜನ ವಿಶೇಷ ಚೇತನರಿದ್ದು ಶೇ.5 ರಿಂದ 7 ರಷ್ಟಿದ್ದಾರೆ. ಇದರಲ್ಲಿ ಶೇ.40 ಮಕ್ಕಳು ಇದ್ದಾರೆ. ಆದ್ದರಿಂದ ಇವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು, ಹಕ್ಕುಗಳು ಲಭಿಸುತ್ತಿವೆಯೇ ಎಂದು ಪರಿಶೀಲಿಸುವ ಅವಶ್ಯಕತೆ ಇದೆ.
ವಿಶೇಷ ಚೇತನ ಎಲ್ಲ ಮಕ್ಕಳಿಗೆ ಅಗತ್ಯವಾಗಿ ಶಿಕ್ಷಣ ನೀಡಬೇಕು. ಶ್ರವಣ ಮತ್ತು ಕಣ್ಣಿನ ದೋಷ ಹೊರತುಪಡಿಸಿ ಉಳಿದ ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಗಳಲ್ಲಿ ದಾಖಲಾತಿ ಸಿಗಬೇಕು. ಕೆಲವು ಶಾಲೆಗಳಲ್ಲಿ ದಾಖಲಾತಿ ನೀಡುತ್ತಿಲ್ಲ್ಲ ಎಂಬ ದೂರು ಇದ್ದು, ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯುಡಿಐಡಿ ಕಾರ್ಡ್ ಸೇರಿದಂತೆ ಸರ್ಕಾರಿ ಸೌಲಭ್ಯಗಳು ಸಮರ್ಪಕವಾಗಿ ಸಿಗುವಂತೆ ವಿಶೇಷ ಚೇತನರ ಪರವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರು ನಿಗಾ ವಹಿಸಬೇಕು. ಶೇ.70 ರಷ್ಟು ವಿಶೇಷಚೇತನರು ಗ್ರಾಮೀಣ ಭಾಗದಲ್ಲಿದ್ದು, ಮನೆಯಲ್ಲಿರುವ ವಿಶೇಷ ಮಕ್ಕಳಿಗೆ ಲಭಿಸಬೇಕಾದ ಸೌಲಭ್ಯಗಳ ಬಗ್ಗೆ ಗಮನ ಹರಿಸಬೇಕು. ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ, ಪೋಕ್ಸೊ ಹೆಚ್ಚಾಗಿದ್ದು, ತಡೆಯಲು ಜಾಗೃತಿ ಹೆಚ್ಚಿಸಬೇಕು, ವಿಶೇಷ ಚೇತನ ಮಕ್ಕಳಲ್ಲಿ ಮಕ್ಕಳ ಸಹಾಯವಾಣಿ 1098 ಬಗ್ಗೆಯೂ ಜಾಗೃತಿ ಮೂಡಿಸಬೇಕು.
ಬಾಲ್ಯ ವಿವಾಹಕ್ಕೆ ಸಂಬAಧಿಸಿದAತೆ ಮಕ್ಕಳ ನಿಶ್ಚಿತಾರ್ಥ ಆದರೂ ಕೂಡ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಬಹುದಾಗಿದ್ದು ಈ ಬಗ್ಗೆಯೂ ಜಾಗೃತಿ ಮೂಡಿಸಿ ಕ್ರಮ ಜರುಗಿಸಬೇಕೆಂದರು.

Karnataka State Commission for Protection of Child Rights ಹಾಗೂ ವಿಶೇಷ ಚೇತನರ ಮಾಹಿತಿ ಅಪ್‌ಡೇಟ್ ಮಾಡುವ ಪಂಚತAತ್ರ ತಂತ್ರಾAಶದ ಬಗ್ಗೆ ವಿಆರ್‌ಡಬ್ಲುö್ಯ, ಯುಆ ರ್‌ಡಬ್ಲುö್ಯ, ಎಂಆರ್‌ಡಬ್ಲುö್ಯ ಗಳಿಗೆ ತರಬೇತಿ ನೀಡಬೇಕು ಎಂದು ಸೂಚಿಸಿದ ಅವರು ಕಾರ್ಯಕರ್ತರಿಂದ ತಾಲ್ಲೂಕುವಾರು ಸಮಸ್ಯೆಗಳ ಕುರಿತು ಆಲಿಸಿ, ಸಂವಾದ ನಡೆಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಮಾತನಾಡಿ, ಕಾಯ್ದೆ-ಕಾನೂನುಗಳನ್ನು ತಿಳಿಯುವ ಜೊತೆಗೆ ಕಾರ್ಯಗತಗೊಳಿಸುವುದು ಬಹಳ ಮುಖ್ಯವೆಂದು ಆಯೋಗದ ಸದಸ್ಯರು ನಮ್ಮನ್ನು ‘ಆ್ಯಕ್ಷನ್ ಮೋಡ್’ ಗೆ ತಂದ ಕಾರಣ ಪೋಕ್ಸೋ, ಬಾಲ್ಯವಿವಾಹ ತಡೆಯಲು ಜಿಲ್ಲೆಯಾದ್ಯಂತ ಮಿಷನ್ ಸುರಕ್ಷಾ ಅಭಿಯಾನವನ್ನು ಅತ್ಯಂತ ಪರಿಣಾಮಕಾರಿಗೊಳಿಸಲಾಗಿದೆ. ಅಭಿಯಾನದ ನಂತರ ಕಳೆದ ಸಾಲಿಗಿಂತ ಈ ಬಾರಿ ಹೆಚ್ಚಿನ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಬಹುದಾಗಿದ್ದು ಇದಕ್ಕೆ ಕಾರಣ ಜಾಗೃತಿ ಮತ್ತು ಅರಿವು ಮೂಡಿಸಿರುವುದಾಗಿದೆ.
ಕಾವಲು ಸಮಿತಿಯ ಮೂಲಕ ಗ್ರಾ.ಪಂ ಮಟ್ಟದಲ್ಲಿ ಗ್ರಾ.ಪಂ ಅಧ್ಯಕ್ಷರು, ಪಿಡಿಓ ಮತ್ತು ಇತರೆ ಅಧಿಕಾರಿ ಸಿಬ್ಬಂದಿಗಳೊಡನೆ ಸಭೆಗಳನ್ನು ನಡೆಸಿ ಅಲ್ಲಿ ಶಾಲೆ ಬಿಟ್ಟ ಮಕ್ಕಳೊಂದಿಗೆ ಸಂವಾದ ನಡೆಸಲಾಗಿದೆ. ಅನಾರೋಗ್ಯ, ಏಕ ಪೋಷಕ ಮತ್ತಿತರೆ ಕಾರಣಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿದ್ದು ಮರಳಿ ಶಾಲೆಗೆ ಕರೆ ತರಲಾಗುತ್ತಿದೆ. ಹಾಗೂ ಮುಂದಿನ ದಿನಗಳಲ್ಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ನಿಯಂತ್ರಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಜಿಲ್ಲೆಯ 1234 ಶಾಲೆಗಳಲ್ಲಿ ಕಾನೂನಿನ ಕುರಿತು, ಬಾಲ್ಯ ವಿವಾಹ, ಪೋಕ್ಸೋ, ಮಕ್ಕಳ ಹಕ್ಕುಗಳ ಕುರಿತು ಶಿಕ್ಷಕರು ಮತ್ತು ಮಕ್ಕಳಿಂದಲೇ ಜಾಗೃತಿ ಮೂಡಿಸುವ, ಚರ್ಚಿಸುವ ಸಾಕ್ಷರತಾ ಕ್ಲಬ್‌ಗಳನ್ನು ಆರಂಭಿಸಲಾಗಿದೆ ಎಂದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸುವರ್ಣ ನಾಯಕ್ ಮಾತನಾಡಿ, ಇಲಾಖೆಯ ಸೂಚನೆ ಮೇರೆಗೆ ವಿಆರ್‌ಡಬ್ಲುö್ಯ, ಯುಆರ್‌ಡಬ್ಲುö್ಯ, ಎಂಆರ್‌ಡಬ್ಲುö್ಯ ಗಳಿಗೆ ತರಬೇತಿ ನೀಡಲಾಗುತ್ತಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ತಿಳಿಸಿದಂತೆ ಜಿಲ್ಲೆಯ ಏಳೂ ತಾಲ್ಲೂಕುಗಳಲ್ಲಿ ಪಂಚತAತ್ರ ತಂತ್ರಾAಶದ ಬಳಕೆ ಬಗ್ಗೆ ಅವರಿಗೆ ತರಬೇತಿ ನಿಡಲಾಗುವುದು. ವಿಶೇಷ ಚೇತನ ಮಕ್ಕಳಿಗೆ ಲಭಿಸಬೇಕಾದ ಸರ್ಕಾರದ ಸೌಲಭ್ಯಗಳು, ಶಿಕ್ಷಣ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವೂ ಜೊತೆಗಿದ್ದು ಅವರ ಸಮನ್ವಯದೊಂದಿಗೆ ಕೆಲಸ ಮಾಡೋಣ ಎಂದರು.
ಜಿಲ್ಲೆಯಲ್ಲಿ 3085 ವಿಶೇಷ ಮಕ್ಕಳಿದ್ದು 2194 ಮಕ್ಕಳು ಸಾಮಾನ್ಯ ಶಾಲೆಯಲ್ಲಿ ಮತ್ತು 423 ವಿಶೇಷ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 7 ವಿಶೇಷ ಶಾಲೆಗಳಿವೆ. ಯಾವುದೇ ವಿಶೇಷ ಮಗು ಶಿಕ್ಷಣ, ಶಾಲೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು, ಅವರಿಗೆ ಲಭಿಸಬೇಕಾದ ಸೌಲಭ್ಯಗಳನ್ನು ನೀಡಲು ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕೆಂದರು.
ಮಹಿಳಾ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಭರತ್ ಕುಮಾರ್ ಮಾತನಾಡಿ, ಪೋಕ್ಸೋ, ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಜನ ಸಾಮಾನ್ಯರು, ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಿದರೆ ಪ್ರಕರಣಗಳನ್ನು ತಡೆಯಬಹುದು. ಗ್ರಾಮೀಣ ಮತ್ತು ನಗರ ಭಾಗದಲ್ಲಿ ಪ್ರಕರಣಗಳ ಸರಿಯಾದ ಮಾಹಿತಿ ನೀಡಬೇಕು. ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ಸಹಾಯವಾಣಿ 1098 ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಕಾನೂನಾತ್ಮಕ ಸಮಸ್ಯೆಗಳಿದ್ದಾಗ ವಿಶೇಷಚೇತನರಿಗೆ ಠಾಣೆಗೆ ಬರಲು ಕಾರ್ಯಕರ್ತರು ಸಹಾಯ ಮಾಡಬೇಕೆಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್.ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶೇಷಚೇತನರಿಗೆ ಸಹಕರಿಸಲು ಸೇವೆ ಸಲ್ಲಿಸುತ್ತಿರುವ ವಿಆರ್‌ಡಬ್ಲುö್ಯ, ಯುಆರ್‌ಡಬ್ಲುö್ಯ, ಎಂಆರ್‌ಡಬ್ಲುö್ಯ ಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಕ್ಕಳ ರಕ್ಷಣೆ ಕುರಿತು ತರಬೇತಿ ನೀಡುವುದು ಅಗತ್ಯವಾಗಿದೆ. ಏಕೆಂದರೆ ಪೋಕ್ಸೋ ಪ್ರಕರಣದಲ್ಲಿ ವಿಶೇಷ ಚೇತನ ಮಕ್ಕಳೂ ಸಹ ಇದ್ದಾರೆ.
ಜಿಲ್ಲೆಯಲ್ಲಿ 214 ಪೋಕ್ಸೋ ಹಾಗೂ 54 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಇಲಾಖೆಯು ಏಪ್ರಿಲ್‌ನಿಂದ ಡಿಸೆಂಬರ್ ವರೆಗೂ 60 ಬಾಲ್ಯವಿವಾಹಗಳನ್ನು ತಡೆಗಟ್ಟಿದೆ. ಮಿಷನ್ ಸುರಕ್ಷಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದ್ದು, ಕಾವಲು ಸಮಿತಿ ಸಭೆಗಳನ್ನು ಮಾಡಲಾಗುತ್ತಿದೆ. ಮುಂದಿನ ಆರು ತಿಂಗಳಲ್ಲಿ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...