Wednesday, September 16, 2026
Wednesday, September 16, 2026

Rotary Club Shivamogga ವಿಶ್ವಾದ್ಯಂತ ರೋಟರಿ ಸಂಸ್ಥೆಯಿಂದ ಮನುಕುಲದ ಸೇವೆ

Date:

Rotary Club Shivamogga ವಿಶ್ವದ ಎಲ್ಲ ಕಡೆಗಳಲ್ಲಿ ರೋಟರಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜಮುಖಿ ಕಾರ್ಯಗಳ ಜತೆಯಲ್ಲಿ ಮನುಕುಲದ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.
ಶ್ರೀಲಂಕಾ ದೇಶದಲ್ಲಿ ಅಲ್ಲಿನ ರೋಟರಿ ಕ್ಲಬ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಕ್ಲಬ್‌ಗಳ ಅಂತರಾಷ್ಟ್ರೀಯ ಮಟ್ಟದ ಸ್ನೇಹಮಿಲನ ಹಾಗೂ ಅವರವರ ಕ್ಲಬ್‌ಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡು ಧ್ವಜಗಳನ್ನು ಹಸ್ತಾಂತರಿಸಿ ಮಾತನಾಡಿ, ರೋಟರಿ ಸಂಸ್ಥೆಯು ಸೇವಾ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಶಾಲೆ ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಕೊಡುಗೆಯಾಗಿ ನೀಡುತ್ತಿದೆ. ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ ಎಂದರು.
ಶ್ರೀಲಂಕಾ-ಮಾಲ್ಡೀವ್ಸ್ ರೋಟರಿ ಸದಸ್ಯ ರಮೇಶ್ ಮಾತನಾಡಿ, ಅಂತರಾಷ್ಟ್ರೀಯ ಭೇಟಿ ಹಾಗೂ ಕಾರ್ಯಕ್ರಮಗಳಿಂದ ಕ್ಲಬ್‌ಗಳ ಕಾರ್ಯಯೋಜನೆ ಹಾಗೂ ಸೇವಾಕಾರ್ಯಗಳ ಮಾಹಿತಿ ಹಂಚಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಶೇಷಗಿರಿ ಡಿ.ಕೆ. ಮಾತನಾಡಿ, ಅಂತರಾಷ್ಟ್ರೀಯ ಧ್ವಜ ಹಸ್ತಾಂತರ ಹಾಗೂ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಸಂಸ್ಥೆಗಳನ್ನು ಬಲಪಡಿಸುವುದರ ಜತೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
Rotary Club Shivamogga ರೋಟರಿ ಕ್ಲಬ್‌ನ ಕೋಟ್ಯಾನ್, ಅಂಜಲಿ ಕಾತರಕಿ, ಅನಂತ ಕಾತರಕಿ, ಪ್ರಭುಲಿಂಗಪ್ಪ ಹಲಗೇರಿ, ಪೂರ್ಣೇಶ್, ಬ್ರಿಜೇಶ್, ದಿವ್ಯಾ, ಆರ್.ಮನೋಹರ, ಮಲ್ಲೇಶ್ , ಬಿಂದು ವಿಜಯಕುಮಾರ್ , ಸುರೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...