Tuesday, February 3, 2026
Tuesday, February 3, 2026

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Date:

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
 
ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್
https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ‌ಪಾವತಿಸಲು ಫೆ.16 ಕಡೆಯ ದಿನವಾಗಿದೆ.  ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.  ಹಾಗೂ ಗಣಿತ ಮತ್ತು ಇಂಗ್ಲೀಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷವಿದ್ದು ಮೀಸಲು ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. ಅಂಕಗಳ ಆಧಾರದಲ್ಲಿ ಆನ್ ಲೈನ್ ಮೂಲಕವೇ ನೇಮಕಾತಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222835 ನ್ನು ಸಂರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...