Social Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆ. 15 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು https://ssp.postmatric.karnataka.gov.in ಮೂಲಕ ಫೆ. 15ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ತಂತ್ರಾಂಶ ಸಹಾಯವಾಣಿ 1902 ನ್ನು ಸಂಪರ್ಕಿಸುವುದು.
