International Human Rights Day ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಂತೋಷ್ ಕುಮಾರ್ ಹೇಳಿದರು.
ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ತಾಲೂಕು ಸೂಗೂರು ಗ್ರಾಮದ ತುಂಗಭದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಕುರಿತು ಅದರ ಬೆಳವಣಿಗೆ ಹಾಗೂ ಮಹತ್ವವನ್ನು ಶಾಲಾ ಮಕ್ಕಳಿಗೆ ವಿವರಿಸಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗದ ವಕೀಲ, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರಿ ವಿರೋಧಿ ಸಂಸ್ಥೆಯ ರಾಷ್ಟ್ರೀಯ ಕಾನೂನು ಸಲಹೆಗಾರ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮಾನವ ಹಕ್ಕುಗಳು ಪ್ರತಿಯೊಂದು ಹಂತದಲ್ಲಿಯೂ ಉಲ್ಲಂಘನೆ ಆಗುತ್ತಿರುವುದು ತುಂಬಾ ಶೋಚನೀಯ ವಿಚಾರ ಎಂದು ಹೇಳಿದರು.
International Human Rights Day ಪ್ರತಿಯೊಬ್ಬ ಮನುಷ್ಯನು ತನ್ನ ಹಕ್ಕು ಹಾಗೂ ಕರ್ತವ್ಯ ನಿರ್ವಹಣೆ ಬಗ್ಗೆ ಎಚ್ಚೆತ್ತುಕೊಂಡರೆ ಯಾವುದೇ ಹಕ್ಕಿನ ಉಲ್ಲಂಘನೆಯಾಗಲು ಸಾಧ್ಯವಿಲ್ಲ. ಆದ್ದರಿಂದ ಇವತ್ತಿನ ಸಮಾಜದಲ್ಲಿ ತನ್ನ ಜವಾಬ್ದಾರಿಗಳನ್ನು ಅರಿತು ನಡೆಯುವುದೇ ನಿಜವಾದ ಮಾನವ ಹಕ್ಕುಗಳನ್ನು ರಕ್ಷಿಸಿಕೊಳ್ಳುವ ಒಂದು ದೊಡ್ಡ ಅಸ್ತ್ರವಾಗಿದೆ ಎಂದು ತಿಳಿಸಿದರು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷ ಸಿದ್ದೇಶ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
