Saturday, October 10, 2026
Saturday, October 10, 2026

Marikamba Jatra 2026 ಮಾರಿಕಾಂಬ ಜಾತ್ರೆ ಫೆಬ್ರವರಿ 24 ರಿಂದ 28 ವರೆಗೆ ಆಯೋಜನೆ. ಅದ್ಧೂರಿ ಉತ್ಸವದ ಪೋಸ್ಟರ್ ಬಿಡುಗಡೆ.

Date:

Marikamba Jatra 2026 ಇತಿಹಾಸ ಪ್ರಸಿದ್ಧ ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.

ಫೆಬ್ರವರಿ 24 ರಿಂದ 28 ರವರೆಗೆ ನಡೆಯಲಿರುವ ಈ ಅದ್ಧೂರಿ ಉತ್ಸವದ ಪೋಸ್ಟರ್ ಅನ್ನು ದೇವಾಲಯದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಎಸ್. ಕೆ. ಮರಿಯಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಪೋಸ್ಟರ್‌ಗಳನ್ನು ಅನಾವರಣಗೊಳಿಸಿದರು. ಸಂಪ್ರದಾಯದಂತೆ ಶಿವಮೊಗ್ಗ ನಗರದ ಆಟೋ ರಿಕ್ಷಾಗಳ ಹಿಂಭಾಗದಲ್ಲಿ ಜಾತ್ರೆಯ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

Marikamba Jatra 2026 ಈ ಸಂದರ್ಭದಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಮಾತನಾಡಿ, ಜಾತ್ರೆಯ ಅಂಗವಾಗಿ ಈ ಬಾರಿ ವಿವಿಧ ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ರಿಕೆಟ್ ಟೂರ್ನಮೆಂಟ್ ಹಾಗೂ ರಾಜ್ಯ ಮಟ್ಟದ ಟಗರು ಕಾಳಗದ ಪೋಸ್ಟರ್‌ಗಳನ್ನೂ ಸಹ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಫೆಬ್ರವರಿ 14 ರಂದು ಮಂಡಳಿ ಯುವಕರ ತಂಡದ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆಯಾಗಿದ್ದರೆ, ಫೆಬ್ರವರಿ 21 ಮತ್ತು 22 ರಂದು ನಗರದ ಸೈನ್ಸ್ ಮೈದಾನದಲ್ಲಿ ರಾಜ್ಯ ಮಟ್ಟದ ಟಗರು ಕಾಳಗ ನಡೆಯಲಿದೆ. ಈ ರೋಚಕ ಸ್ಪರ್ಧೆಗೆ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರೆಯ ಮೆರುಗನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...